ತುಮಕೂರು

'ಶಿಸ್ತು ಇದ್ದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ'

Published On :

ತುಮಕೂರು: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತನ್ನು ಕಾಪಾಡಿಕೊಂಡಾಗ ಮಾತ್ರ ಯಶಸ್ವಿ ಕಾಣಲು ಸಾಧ್ಯ ಎಂದು ಡಯಟ್‌ನ ಪ್ರಾಂಶುಪಾಲ ಗೋಪಾಲಕೃಷ್ಣ ಕರೆ ನೀಡಿದರು.
ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ  ಶಿಕ್ಷಣ ಸಂಶೋಧನೆ ಸುಧಾರಣಾ ಸಂಸ್ಥೆ  ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ  ಟೆಕ್ನಿಕಲ್ ಬ್ಯಾರಿಯರ್ಸ್ ರಿಡಕ್ಷನ್ ಪ್ರೋಗ್ರಾಂ (ತಾಂತ್ರಿಕ ದೋಷ ನಿವಾರಣಾ ಕಾರ್ಯಕ್ರಮ) ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯಾದಾದ್ಯಂತ ಈ ಕಾರ್ಯಾಗಾರ ಕೇವಲ ಮಂಡ್ಯ, ಉಡುಪಿ, ತುಮಕೂರು ಮೂರು ಜಿಲ್ಲೆಗಳಲ್ಲಿ ನಡೆಯುತ್ತಿದ್ದು, ತುಮಕೂರು ಜಿಲ್ಲೆಯ ವಿವಿಧ ಗ್ರಾಮಗಳಿಂದ 30 ವಿದ್ಯಾರ್ಥಿಗಳು ಪಾಲ್ಗೊಳ್ಳಲು ಅವಕಾಶವಿರುತ್ತದೆ ಎಂದರು. ಒಂದು ತಿಂಗಳ ಅವಧಿಯ ಈ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದ ಅವರು ಕಾರ್ಯಾಗಾರದಲ್ಲಿ ನೀಡುವ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳಬೇಕು. ಈ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಬೇಕಾದ ಕೌಶಲ್ಯಗಳ ತರಬೇತಿ ನೀಡಲಾಗುವುದು, ಇಲ್ಲಿ ಕಲಿತ ಕೌಶಲ್ಯಗಳನ್ನು ಇನ್ನಿತರ  ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುವುದರೊಂದಿಗೆ ಕಾರ್ಯಾಗಾರವನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕಾರ್ಯಾಗಾರದ ಸಂಯೋಜಕ ಹಾಗೂ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ಕರುಣಾಕರ್, ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳೆಂದು ಹಿಂಜರಿಕೆ ಮನೋಭಾವನ್ನು ಮನಸ್ಸಿನಿಂದ ಕಿತ್ತೊಗೆಯಬೇಕು. ನಗರ ಪ್ರದೇಶದ ವಿದ್ಯಾರ್ಥಿಗಳಂತೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಲಿಕಾ ಸೌಲಭ್ಯಗಳು, ಕಲಿಕಾ ಸೂಕ್ತ ವಾತಾವರಣಗಳು ಇಲ್ಲದಿರುವುದರ ಬಗ್ಗೆ ವಿಷಾದಿಸಿದರು.
ಒಂದು ತಿಂಗಳ ಅವಧಿಯ ಈ ಕಾರ್ಯಾಗಾರದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಂಗ್ಲಭಾಷೆ ಕಲಿಕೆ, ವಿಜ್ಞಾನದ ಪ್ರಯೋಗಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಲಿಸಲಾಗುತ್ತದೆ. ಇವುಗಳ ಸದುಪಯೋಗ ಆದಾಗ ಮಾತ್ರ ಕಾರ್ಯಾಗಾರ ಯಶಸ್ವಿಯಾಗಲು ಸಾಧ್ಯ ಎಂದು ಎಂದರು.
ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಕೆ.ಎ. ಕೃಷ್ಣಮೂರ್ತಿ, ಉಪ ಪ್ರಾಂಶುಪಾಲ ಡಾ. ಎಂ.ಕೆ. ವೀರಯ್ಯ ಮಾತನಾಡಿ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಸಕ್ರೀಯವಾಗಿ ಪಾಲ್ಗೊಳುವಂತೆ ತಿಳಿಸಿದರು. ಪ್ರಾಧ್ಯಾಪಕರಾದ ಡಾ. ಹರೀಶ್‌ಕುಮಾರ್, ಶ್ವೇತಾ, ಸುನೀತಾ ನಾಗರಾಜು, ಮಲ್ಲಿಕಾರ್ಜುನ್, ಸವಿತಾ ಕೃಷ್ಣ ಇನ್ನಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.