ಆರ್‌ಎಲ್‌ಜೆಐಟಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ತೆರೆ
ದೊಡ್ಡಬಳ್ಳಾಪುರ: ಇಲ್ಲಿನ ಆರ್.ಎಲ್. ಜಾಲಪ್ಪ ತಾಂತ್ರಿಕ ಮಹಾ ವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ನೇತೃತ್ವದಲ್ಲಿ ನಡೆದ 2 ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಇತ್ತೀಚಿನ ಸಂಶೋಧನೆಗಳ ಕುರಿತು ನಡೆಯುತ್ತಿರುವ ವಿಚಾರ ಸಂಕಿರಣದಲ್ಲಿ ವಿವಿಧ ಕಾಲೇಜುಗಳಿಂದ ಬಂದಿದ್ದ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಅನೇಕ
ಬೆಳವಣಿಗೆಗಳ ಕುರಿತು ವೈಜ್ಞಾನಿಕ ಪ್ರಬಂಧಗಳನ್ನು ಮಂಡಿಸಿದರು. ವಿಜ್ಞಾನದ ಅಧ್ಯಯನದ ರೀತಿನೀತಿಗಳು ಸಡಿಲಗೊಂಡಿದ್ದು, ಅನ್ವಯಿಕ ದೃಷ್ಟಿಕೋನದಲ್ಲಿ ನಾವು ವಿಚಾರವನ್ನು ಗ್ರಹಿಸುತ್ತಿಲ್ಲ. ಹೀಗಾಗಿ ಕೌಶಲ ಆಧಾರಿಕ ವೈಜ್ಞಾನಿಕ ಚಿಂತನೆಗಳಿಗೆ ಅವಕಾಶ ದೊರೆಯುತ್ತಿಲ್ಲ. ಬಹುಮುಖ್ಯವಾಗಿ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ವಿಭಾಗದಲ್ಲಿ ಬದಲಾವಣೆಯ ಅಲೆಗಳನ್ನು ಸಮರ್ಥವಾಗಿ ಎದುರಿಸುವ ಮತ್ತು ಅದರ ದಿಕ್ಕುದಿಸೆಗಳನ್ನು ನಿರ್ಧರಿಸುವ ವೈಚಾರಿಕ ಪ್ರಜ್ಞೆ ಬರಬೇಕಿದೆ. ದೇಶದ ಮಹತ್ವದ ಉದ್ಯೋಗದಾಯಿ
ಕ್ಷೇತ್ರಗಳಲ್ಲಿ ಇದೂ ಒಂದಾಗಿದ್ದು, ಯುವಕರು ಮತ್ತು ಯುವತಿಯರು ಇದರತ್ತ ಆಕರ್ಷಿತರಾಗುತ್ತಿದ್ದಾರೆ. ಆಕರ್ಷಣೆ ಕೇವಲ ಆಕರ್ಷಣೆಯಾಗಿರದೆ ಕ್ಷೇತ್ರದ ಹೊಣೆಯಾಧಾರಿತ ಬೆಳವಣಿಗೆಗೆ ಸಹಕಾರಿಯಾಗಬೇಕಾದ ಅನಿವಾರ್ಯತೆ ಕಂಡು ಬರುತ್ತಿದೆ. ಅದಕ್ಕೆ ಈ ಬಗೆಯ ವಿಚಾರ ಸಂಕಿರಣಗಳು ದಿಕ್ಸೂಚಿಯಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಆರ್.ಎಲ್.ಜಾಲಪ್ಪ ತಾಂತ್ರಿಕ ವಿದ್ಯಾ ಸಂಸ್ಥೆಯ ಸಿಇಓ ಎಸ್.ಎಲ್.ಗಂಗಾಧರಪ್ಪ ಅಧ್ಯಕ್ಷತೆ ವಹಿಸಿದ್ದರು.
ನಿರ್ದೇಶಕ ಜೆ.ರಾಜೇಂದ್ರ, ಪ್ರಾಂಶುಪಾಲ ಡಾ.ಎ.ಎನ್.ನಂದಕುಮಾರ್, ವಿಭಾಗ ಮುಖ್ಯಸ್ಥ ಡಾ.ಜಿ.ಕೆ.ಶ್ರೀನಿವಾಸಗೌಡ, ಬೆಂಗಳೂರಿನ ಡಾ.ಎಚ್.ಎನ್.ಸುರೇಶ್, ಡಾ.ಪಿ.ವಿ.ರಾವ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

