ಕೋಳಘಟ್ಟದಲ್ಲಿ ಶೇ.74 ಮತದಾನ
ತುರುವೇಕೆರೆ: ತಾಲೂಕಿನ ಕೋಳಘಟ್ಟದ ಮತಗಟ್ಟೆ-8 ರಲ್ಲಿ ನಡೆದ ಲೋಕಸಭೆ ಮರು ಚುನಾವಣೆ ಶಾಂತಿಯುತವಾಗಿ ನಡೆಯಿತು. ಶೇ.74 ಮತದಾನವಾಗಿದೆ. ಮತಗಟ್ಟೆಯಲ್ಲಿ 769 ಮಂದಿ ಮತದಾರರು ಇದ್ದು ಇವರಲ್ಲಿ 570 ಮಂದಿ ಮತ ಚಲಾಯಿಸಿದ್ದಾರೆ. 308 ಮಂದಿ ಪುರುಷರು ಮತ ಚಲಾಯಿಸಿದರೆ 262 ಮಂದಿ ಮಹಿಳೆಯರು ಮತ ಚಲಾಯಿಸಿದರು. 90 ವರ್ಷದ ವೃದ್ಧೆ ಭದ್ರಮ್ಮ ಊರುಗೋಲಿನ ಆಸರೆಯಿಂದ ಮತಕಟ್ಟೆಗೆ ಬಂದು ಮತ ಚಲಾಯಿಸಿದ್ದು ವಿಶೇಷವಾಗಿತ್ತು.
ಕಳೆದ ಏ17 ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಸಿಬ್ಬಂದಿಯೇ ನಕಲಿ ಮತದಾನ ಮಾಡಿದ್ದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಮರು ಮತದಾನ ಮಾಡುವಂತೆ ಚುನಾವಣಾ ಆಯೋಗ ಶಿಫಾರಸು ಮಾಡಿತ್ತು. ಕಳೆದ ಚುನಾವಣೆಯಲ್ಲಿ 564 ಮಂದಿ ಮತ ಚಲಾಯಿಸಿದ್ದರು. ಅವರಲ್ಲಿ 391 ಪುರುಷರು, 379 ಮಹಿಳೆಯರು ಇದ್ದು ಶೇಕಡಾ 72.95 ಮತದಾನವಾಗಿತ್ತು. ಸಿಪಿಐ ನಿರಂಜನ್ ಕುಮಾರ್ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು, ಹೆಬ್ಬಾಕಾ ರವಿ, ತಾಲೂಕು ಅಧ್ಯಕ್ಷ ಅರಳೀಕೆರೆ ರವಿಕುಮಾರ್, ಮಾಜಿ ಅಧ್ಯಕ್ಷ ಟಿ.ಎಸ್.ಬೋರೇಗೌಡ, ಮಾಜಿ ಶಾಸಕ ನಂಜೇಗೌಡ, ಜೆಡಿಎಸ್‌ನಿಂದ ಶಾಸಕ ಎಂ.ಟಿ.ಕೃಷ್ಣಪ್ಪ, ಶಿವಾನಂದ್, ಕಾಂಗ್ರೆಸ್‌ನಿಂದ ಮಸಾಲಾ ಜಯರಾಂ, ಚೌದ್ರಿ ರಂಗಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎನ್.ಶಿವರಾಜು, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಎನ್.ಆರ್.ಜಯರಾಂ ಮೊದಲಾದವರು ಖುದ್ದು ಹಾಜರಿದ್ದು ತಮ್ಮ ಪಕ್ಷದ ಪರವಾಗಿ ಮತ ಚಲಾಯಿಸುವಂತೆ ಮತದಾರರ ಮನವೊಲಿಸುತ್ತಿದ್ದುದು ಕಂಡು ಬಂತು. ಸಹಾಯಕ ಚುನಾವಣಾಧಿಕಾರಿ ಚಂದ್ರ, ತಹಸೀಲ್ದಾರ್ ಮಾರೇಗೌಡ ಚುನಾವಣೆ ಉಸ್ತುವಾರಿ ವಹಿಸಿದ್ದರು. ಯಾವುದೇ ಗೊಂದಲವಿಲ್ಲದೇ ಮತದಾನ ಶಾಂತಿಯುತವಾಗಿ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

