ತುಮಕೂರು

ಮುಖ್ಯಾಧಿಕಾರಿಗೆ ಕಿರುಕುಳ: ತಹಸೀಲ್ದಾರ್‌ಗೆ ಮನವಿ

Published On :

ಕುಣಿಗಲ್: ಇಲ್ಲಿನ ಪುರಸಭೆ ಮುಖ್ಯಾಧಿಕಾರಿಗೆ ವಿನಾಕಾರಣ ಕಿರುಕುಳ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ಪರ ಸಂಘಟನೆ ಮುಖಂಡರು, ಡಾ.ಅಂಬರೀಷ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಸೇರಿದಂತೆ ಮತ್ತಿತರರು ತಹಸೀಲ್ದಾರ್‌ಗೆ ಮಂಗಳವಾರ ಮನವಿ ಸಲ್ಲಿಸಿದರು.
ಪುರಸಭೆ ಮುಖ್ಯಾಧಿಕಾರಿ ಅನ್ನದಾನಿ ದಲಿತ ಜನಾಂಗದವರಾಗಿದ್ದು, ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಭ್ರಷ್ಟಾಚಾರಿ ಮತ್ತು ಜಾತಿವಾದಿಗಳಿಗೆ ಮನ್ನಣೆ ನೀಡುತ್ತಿಲ್ಲ ಎಂಬ ಕಾರಣಕ್ಕಾಗಿ ವಿವಾದಗಳನ್ನು ಸೃಷ್ಟಿಸಿ, ಸುಳ್ಳು ಆರೋಪ ಮಾಡಿ, ರಾಜಕೀಯ ಕುತಂತ್ರದಿಂದ ಮೂರು ಬಾರಿ ವರ್ಗಾವಣೆ ಮಾಡಿದರೂ, ಆರೋಪಗಳು ಸಾಬೀತಾಗದ ಕಾರಣ ನಾಲ್ಕನೇ ಬಾರಿ ಸರ್ಕಾರ ಮತ್ತೆ ಅವರನ್ನೇ ಮುಖ್ಯಾಧಿಕಾರಿಯಾಗಿ  ಮಾಡಿದೆ. ಈ ಮಧ್ಯೆ ಈಚೆಗೆ ಪಟ್ಟಣದ 13ನೇ ವಾರ್ಡ್‌ನಲ್ಲಿ ನಡೆದ ಬಡಿದಾಟಕ್ಕೆ ಮುಖ್ಯಾಧಿಕಾರಿಯಯನ್ನೇ ಹೊಣೆಗಾರರನ್ನಾಗಿ ಮಾಡಿರುವುದು ಸರಿಯಲ್ಲ. ಅನ್ನದಾನಿಯರಿಗೆ ಕಿರುಕುಳ ನೀಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ಅಗ್ರಹಿಸಿದ್ದಾರೆ. ನಿಯೋಗದಲ್ಲಿ ತುಮಕೂರು ಜಿಲ್ಲಾ ಡಾ.ಅಂಬರೀಷ್ ಅಭಿಮಾನಿ ಸಂಘದ ಅಧ್ಯಕ್ಷ ಕೆ.ಟಿ.ನಾಗೇಶ್, ದಲಿತ ಮುಖಂಡರಾದ ಎನ್.ರಾಜೇಶ,ಲಕ್ಷ್ಮೀನಾರಾಯಣ, 19ನೇ ವಾರ್ಡ್ ಸದಸ್ಯ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.