ತುಮಕೂರು

ಠಾಗೂರ್ ಶಾಲೆಗೆ ಸಮಗ್ರ ಪ್ರಶಸ್ತಿ

Published On :

ತಿಪಟೂರು: ಪಟ್ಟಣದ ಠಾಗೂರ್ ಹಿರಿಯ ಪ್ರಾಥಮಿಕ ಶಾಲೆ ಹೋಬಳಿ ಮಟ್ಟದ ಕ್ರೀಡಾ ಕೂಟದಲ್ಲಿ ಚಾಂಪಿಯನ್ ಶಿಪ್ ಮತ್ತು ಸಮಗ್ರ ಪ್ರಶಸ್ತಿ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ಕಸಬಾ ಎ ವಿಭಾಗದ ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಖೋಖೋ, ಥ್ರೋಬಾಲ್ ಮತ್ತು ಚೆಸ್ನಲ್ಲಿ ಪ್ರಥಮ ಸ್ಥಾನ, ಟೇಬಲ್ ಟೆನಿಸ್ನಲ್ಲಿ ದ್ವಿತೀಯ, ಅಥ್ಲೆಟಿಕ್ಸ್ 100, 200, 400 ಮೀಟರ್ ಓಟದ ಸ್ಪರ್ಧೆಯಲ್ಲಿ ಹಾಗೂ 400 ಮತ್ತು 600 ಮೀಟರ್ ರಿಲೇನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಸಂಜನ 200ಮೀ ಹರ್ಡಲ್ಸ್ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಕನ್ನಯ್ಯಲಾಲ್ 100, 200, 400 ಮೀಟರ್ ಓಟದ ಸ್ಪರ್ಧೆ ಮತ್ತು ರಿಲೆಯಲ್ಲಿ ಪ್ರಥಮ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ದೈಹಿಕ ಶಿಕ್ಷಕ ಎಂ. ಚಂದ್ರಯ್ಯಗೆ ಸಂಸ್ಥೆಯ ಅಧ್ಯಕ್ಷ ಬಿ.ಡಿ. ರಾಮಯ್ಯ, ಬಿ.ಸಿ. ಗೀತಾ, ಮುಖ್ಯ ಶಿಕ್ಷಕಿ ಸಾವಿತ್ರಿ ಹೆಗಡೆ ಅಭಿನಂದನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.