ವಿದ್ಯಾರ್ಥಿ ವೇತನಕ್ಕೆ ಪ್ರತಿಭಟನೆ
ಗುಬ್ಬಿ: ಕಳೆದೆರಡು ವರ್ಷಗಳಿಂದಲೂ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಸಮರ್ಪಕವಾಗಿ ನೀಡದಿರುವುದರಿಂದ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗಿದೆ. ತ್ವರಿತವಾಗಿ ಬಾಕಿ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸಂಚಾಲಕ ಜಿ.ಸಿ.ನಾಗರಾಜು ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ವಾಟರ್ ಫಿಲ್ಟರ್ ಕೊಡುಗೆ
ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ರೋಟರಿ ಸಂಸ್ಥೆ ವತಿಯಿಂದ ತಾಲೂಕಿನ 25 ಆಯ್ದ ಹಿಂದುಳಿದ ಶಾಲೆಗಳಿಗೆ ವಾಟರ್ ಫಿಲ್ಟರ್ ವಿತರಿಸಲಾಗುತ್ತಿದೆ ಎಂದು ಯೋಜನಾಧಿಕಾರಿ ಪಿ. ಶ್ರೀನಿವಾಸ್ ತಿಳಿಸಿದರು. ಪಟ್ಟಣದ ಯೋಜನಾ ಕಚೇರಿ ಸಭಾಂಗಣದಲ್ಲಿ ವಾಟರ್ ಫಿಲ್ಟರ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕಿನ ಅನೇಕ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆಯಿದ್ದು, ಶಾಲಾ ಮಕ್ಕಳು ಸಾಂಕ್ರಾಮಿಕ ರೋಗಕ್ಕೆ ತುತ್ತಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ವಾಟರ್ ಫಿಲ್ಟರ್ ವಿತರಿಸಲಾಗುತ್ತಿದೆ ಎಂದರು. ಕೆ.ಸಂತೋಷ್ಕುಮಾರ್ ಓಸ್ವಾಲ್, ಡಾ. ರಮೇಶ್ ಬಾಬು, ಸಿ.ಆರ್.ಪಿ ಪಟ್ಟಾಭಿರಾಮು, ಶಿವಣ್ಣ, ಸರಿತಾ ಉಪಸ್ಥಿತರಿದ್ದರು.
ವಿವಿಯಲ್ಲಿ ಎಂಎಸ್ಸಿ ಕೋರ್ಸ್ ಆರಂಭಿಸಲು ಮನವಿ
ತುಮಕೂರು: ತುಮಕೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ಸಿ ಕೋರ್ಸ್ ಆರಂಭಿಸುವಂತೆ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಅವರು ಕುಲಪತಿ ಪ್ರೊ. ರಾಜಾಸಾಬ್ ಅವರಿಗೆ ಮನವಿ ಮಾಡಿದರು.
ತುಮಕೂರು ವಿಶ್ವವಿದ್ಯಾನಿಲಯಕ್ಕೆ ಗುರುವಾರ ಭೇಟಿ ನೀಡಿ, ಹಲವು ಕೋರ್ಸ್ಗಳ ಸ್ಥಾಪನೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಬಿಎಸ್ಸಿ ಓದಿದ ವಿದ್ಯಾರ್ಥಿಗಳು ಎಂಎಸ್ಸಿ ಓದಬೇಕಾದರೆ, ತುಮಕೂರು ವಿವಿಯಲ್ಲಿ ಎಂಎಸ್ಸಿ ಕೋರ್ಸ್ಗಳಿಲ್ಲ. ಇನ್ನು ತುಮಕೂರು ವಿವಿಯ ವಿದ್ಯಾರ್ಥಿಗಳು ಬೇರೆ ವಿಶ್ವವಿದ್ಯಾನಿಲಯದಲ್ಲಿ ಎಂಎಸ್ಸಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು. ತುಮಕೂರು ವಿವಿಯ ವಿದ್ಯಾರ್ಥಿಗಳಿಗೆ ಬೆಂಗಳೂರು, ಮೈಸೂರು ಸೇರಿದಂತೆ ಇತರೆ ವಿಶ್ವವಿದ್ಯಾನಿಲಯಗಳು ಸೀಟು ನೀಡಲು ಹಿಂದೆ ಮುಂದೆ ನೋಡುತ್ತಿವೆ. ತಮ್ಮ ವಿಶ್ವವಿದ್ಯಾನಿಲಯಗಳಲ್ಲಿ ಓದಿದ ಮಕ್ಕಳನ್ನು ಬಿಟ್ಟು ಬೇರೆ ವಿವಿಯ ವಿದ್ಯಾರ್ಥಿಗಳಿಗೆ ಸೀಟು ನೀಡಲು ಮೀನಾಮೇಷ ಎಣಿಸುತ್ತಿವೆ. ಇದರಿಂದಾಗಿ ಗ್ರಾಮೀಣ ಭಾಗದ, ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಬಹುತೇಕ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನೇ ಮೊಟಕುಗೊಳಿಸುವಂತಹ ವಾತಾವರಣ ನಿರ್ಮಾಣವಾಗುತ್ತಿದೆ ಎಂದರು.
ರಾಜಣ್ಣ ಅವರ ಮಾತುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ತುಮಕೂರು ವಿವಿ ಉಪಕುಲಪತಿಗಳು, ರಾಜಣ್ಣ ಅವರ ಸಲಹೆ ಹಾಗೂ ಕಳಕಳಿಗೆ ವಿಶ್ವವಿದ್ಯಾನಿಲಯವೂ ಸ್ಪಂದಿಸುವ ಮೂಲಕ ವಿದ್ಯಾರ್ಥಿಗಳ ಪ್ರಗತಿಗೆ ಶ್ರಮಿಸಲಿದೆ ಎಂದು ಪ್ರೊ. ರಾಜಾಸಾಬ್ ತಿಳಿಸಿದರು.
ಈ ಸಂದರ್ಭದಲ್ಲಿ ತುಮಕೂರು ವಿವಿ ರಿಜಿಸ್ಟ್ರಾರ್ ಶಿವಲಿಂಗಯ್ಯ, ಡಿಸಿಸಿ ಬ್ಯಾಂಕ್ ಮ್ಯಾನೇಜರ್ ನರಸಿಂಹಮೂರ್ತಿ, ಆಡಿಟರ್ ರಾಮಚಂದ್ರಪ್ಪ, ನಿರ್ದೇಶಕ ನಾರಾಯಣಗೌಡ, ಇಂಜಿನಿಯರ್ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

