ತುಮಕೂರು

ತುಮಕೂರು-ಬೆಂಗಳೂರು ಸ್ಪೆಷಲ್ ಎಕ್ಸ್ಪ್ರೆಸ್ಗೆ ವರ್ಷದ ಸಂಭ್ರಮ: ರಕ್ತದಾನ ಶಿಬಿರ ನಾಳೆ

Published On :

ತುಮಕೂರು: ತುಮಕೂರು-ಬೆಂಗಳೂರು ಸ್ಪೆಷಲ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಗೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆ.3ರಂದು ತುಮಕೂರು ರೈಲ್ವೆ ನಿಲ್ದಾಣದ ಆವರಣದಲ್ಲಿ ರಕ್ತದಾನ ಶಿಬಿರ ಮತ್ತು ರೈಲು ಪ್ರಯಾಣಿಕರ ಪ್ರತಿಭಾವಂತ ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ತುಮಕೂರು-ಬೆಂಗಳೂರು ರೈಲ್ವೆ ಪ್ರಯಾಣಿಕರ ವೇದಿಕೆ ಹಮ್ಮಿಕೊಂಡಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ರಕ್ತದಾನ ಶಿಬಿರವನ್ನು ಮಾಜಿ ಸಂಸದ ಜಿ.ಎಸ್. ಬಸವರಾಜು ಉದ್ಘಾಟಿಸಲಿದ್ದಾರೆ. ನಂತರ ಬೆಳಗ್ಗೆ 10 ಗಂಟೆಗೆ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ನಡೆಯಲಿದ್ದು, ಸಂಸದ ಎಸ್.ಪಿ. ಮುದ್ದಹನುಮೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತುಮಕೂರು ಶಾಸಕ ಡಾ. ರಫೀಕ್ ಅಹಮದ್, ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್ಗೌಡ, ವಿಧಾನ ಪರಿಷತ್ ಸದಸ್ಯ ಡಾ. ಎಂ.ಆರ್. ಹುಲಿನಾಯ್ಕರ್ ವೇದಿಕೆ ಪರವಾಗಿ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿ ಅಭಿನಂದಿಸಲಿದ್ದಾರೆ. ನೈಋತ್ಯ ರೈಲ್ವೆ ವಲಯದ ಎಡಿಆರ್ಎಂ ಸುನಂದ ಅರುಲ್ ಮತ್ತು ಡಿಸಿಎಂ ಹನುಮಂತರಾಯಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ವೇಳೆ ಬೆಳಗ್ಗೆ 8 ಗಂಟೆಗೆ ಎಕ್ಸ್ಪ್ರೆಸ್ ರೈಲಿನ ಮುಂಭಾಗ ಕೇಕ್ ಕತ್ತರಿಸಿ ವಿಶೇಷ ರೈಲಿನ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತದೆ. ರಕ್ತದಾನ ಶಿಬಿರ ಮತ್ತು ಕಾರ್ಯಕ್ರಮದಲ್ಲಿ ರೈಲ್ವೇ ಪ್ರಯಾಣಿಕರು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವೇದಿಕೆ ಅಧ್ಯಕ್ಷೆ ಬಾ. ಹ. ರಮಾಕುಮಾರಿ ಕೋರಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.