ಶುಲ್ಕ ಹೆಚ್ಚಳಕ್ಕೆ ಎಬಿವಿಪಿ ಪ್ರತಿಭಟನೆ
ತುಮಕೂರು: ತುಮಕೂರು ವಿಶ್ವವಿದ್ಯಾಲಯ ಶುಲ್ಕ ಹೆಚ್ಚವನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ವಿವಿ ಮುಂಭಾಗ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಸಹಕಾರ್ಯದರ್ಶಿ ಅಮರೇಶ್, ತುಮಕೂರು ವಿವಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿ.ವಿ. ಕ್ಯಾಂಪಸ್ನಲ್ಲಿ ಪಿಜಿ ಮತ್ತು ಯುಜಿ ಸೀಟುಗಳನ್ನು ಹೆಚ್ಚಿಸಿರುವುದನ್ನು ಅ.ಭಾ.ವಿ.ಪ. ಸ್ವಾಗತಿಸುತ್ತದೆ. ಆದರೆ ಅದೇ ಸಂದರ್ಭದಲ್ಲಿ ಅತಿ ಹೆಚ್ಚು ಶುಲ್ಕದ ಹೊರೆಯನ್ನು ವಿದ್ಯಾರ್ಥಿಗಳ ಮೇಲೆ ಹೇರಿರುವುದನ್ನು ಅ.ಭಾ.ವಿ.ಪ. ತೀವ್ರವಾಗಿ ಖಂಡಿಸುತ್ತದೆ ಎಂದರು.
ಜಿಲ್ಲೆಯ ಬಹುತೇಕ ಎಲ್ಲಾ ತಾಲೂಕುಗಳಲ್ಲಿ ಬರದ ಪರಿಸ್ಥಿತ ಇದ್ದಾಗಲೂ ಶುಲ್ಕ ಹೆಚ್ಚಿಸಿರುವುದು ಸರಿಯಲ್ಲ. ತುಮಕೂರು ವಿ.ವಿ ಗ್ರಾಮೀಣ ಪ್ರದೇಶದಲ್ಲಿರುವುದರಿಂದ ಇಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಹಾಗೆ ಕಡಿಮೆ ಶುಲ್ಕ ನಿಗದಿ ಮಾಡಬೇಕಾಗಿತ್ತು. ಆದರೆ ರಾಜ್ಯದ ಅನೇಕ ವಿವಿಗಳಿಗಿಂತ ದುಬಾರಿ ಶುಲ್ಕ ನಿಗದಿ ಮಾಡಿರುವುದು ವಿದ್ಯಾರ್ಥಿಗಳಿಗೆ ಹೊರೆಯಾಗಿದೆ. ಆದ್ದರಿಂದ ಹೆಚ್ಚವರಿ ಶುಲ್ಕವನ್ನು ಹಿಂತಿರುಗಿಸಿ ವಿದ್ಯಾರ್ಥಿಗಳ ಮೇಲಿನ ಹೊರೆಯನ್ನು ಇಳಿಸಬೇಕು ಹಾಗೂ ಜಿಲ್ಲೆಯಾದ್ಯಂತ ಬರ ಪರಿಸ್ಥತಿ ಇದ್ದಾಗಲು ವಿವಿಯು ದಶಮಾನೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ರೀತಿಯಲ್ಲಿ ನಡೆದುಕೊಳ್ಳುವದನ್ನು ಬಿಟ್ಟು 100 ರು. ಪ್ರತಿ ವಿದ್ಯಾರ್ಥಿಗಳಿಂದ ಸಂಗ್ರಹಿಸುತ್ತಿರುವುದು ದುರದೃಷ್ಟಕರ, ಬೋಧನಾ ಶುಲ್ಕ ಸ್ನಾತಕೋತ್ತರ ತರಗತಿಗಳಿಗೆ 5 ಸಾವಿರ ರು. ಇದ್ದು ಇದು ಅತ್ಯಂತ ದುಬಾರಿ ಇದನ್ನು ಕಡಿತಗೊಳಿಸಿ ಹಿಂತಿರುಗಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಸಂಚಾಲಕ ರವಿಕುಮಾರ್ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಯ ಕುಲ ಸಚಿವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಸಹ ಸಂಚಾಲಕ ತೇಜುಮೂರ್ತಿ, ಹರಿಪ್ರಸಾದ್, ಕಾರ್ಯಕರ್ತರಾದ ಮಂಜುನಾಥ್, ಭರತ್, ಮಲ್ಲಿಕಾರ್ಜುನ ಮತ್ತು ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

