ಅಸಮರ್ಪಕ ಬಸ್ ವ್ಯವಸ್ಥೆ ವಿರೋಧಿಸಿ ಪ್ರತಿಭಟನೆ
ಕೊರಟಗೆರೆ: ವಿದ್ಯಾರ್ಥಿಗಳಿಗೆ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಾಸ್ ಇದ್ದರೂ, ಸಮರ್ಪಕ ಬಸ್ ಸೌಕರ್ಯವಿಲ್ಲದೆ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪರದಾಡುತ್ತಿದ್ದು, ಸಮರ್ಪಕ ಬಸ್ ಸೌಕರ್ಯ ಕಲ್ಪಿಸುವಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ತುಮಕೂರು ವಿಭಾಗದ ಬಸ್‌ಗಳು ತಾಲೂಕಿನಲ್ಲಿ ಸಂಚರಿಸದೆ ಚಿಕ್ಕಬಳ್ಳಾಪುರ ವಿಭಾಗದ ಬಸ್‌ಗಳು, ಗೌರಿಬಿದನೂರು ಮುಖಾಂತರ ಕೊರಟಗೆರೆ ಮಾರ್ಗವಾಗಿ ತುಮಕೂರಿಗೆ ಹಾಗೂ ಪಾವಗಡ ವಿಭಾಗದ ಮತ್ತು ಶಿರಾ ವಿಭಾಗದ ಬಸ್‌ಗಳು ಕೊರಟಗೆರೆ ಮಾರ್ಗವಾಗಿ ಒಡಾಡುತ್ತಿದ್ದು ಅವು ಸಮಯಕ್ಕೆ ಸರಿಯಾಗಿ ಸಂಚರಿಸದೆ ಇರುವುದರಿಂಗ ತಾಲೂಕಿನ ನಾನಾ ಗ್ರಾಮಗಳಿಂದ ಪ್ರೌಢಶಾಲೆ ಮತ್ತು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಹೋಗಲಾಗದೆ ತೊಂದರೆ ಅನುಭವಿಸುತ್ತಿದ್ದೇವೆಂದು ವಿದ್ಯಾರ್ಥಿಗಳು ದೂರಿದರು. ತುಮಕೂರು ಕೆಎಸ್‌ಆರ್‌ಟಿಸಿ ಡಿಪೋದ ಅಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಶೇಖರ್, ವಿದ್ಯಾರ್ಥಿ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ತುಮಕೂರು ಕಚೇರಿಗೆ ತೆರಳಿ, ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ಪ್‌ಡೆದರು.
ಪ್ರತಿಭಟನೆಯಲ್ಲಿ ಪ್ರಥಮ ದರ್ಜೆ ಕಾಲೇಜು ಮತ್ತು ಪದವಿ ಪೂರ್ವ ಕಾಲೇಜು ಸೇರಿದಂತೆ ನಾನಾ ಶಾಲಾ ವಿದ್ಯಾರ್ಥಿಗಳೊಂದಿಗೆ ಬಿಜೆಪಿ ತಾಲೂಕು ಅಧ್ಯಕ್ಷ ಪವನ್‌ಕುಮಾರ್, ಮಾಜಿ ಅಧ್ಯಕ್ಷ ತಿಮ್ಮಜ್ಜ, ಸಿ.ಎಸ್. ಹನುಮಂತರಾಜು, ರೈತ ಮೋರ್ಚಾ ಅಧ್ಯಕ್ಷ ಪ್ರಸ್ನನಕುಮಾರ್ ಮುಖಂಡರಾದ ಪೆದ್ದರಾಜು, ರವಿಶಂಕರ್, ನಟರಾಜು, ನಾಗರಾಜು, ಪ್ರಕಾಶ್‌ರೆಡ್ಡಿ ರವಿಕುಮಾರ್, ಪ್ರಸನ್ನ, ಚಂದ್ರಶೇಖರಯ್ಯ ಸೇರಿದಂತೆ ಇನ್ನಿತರ ಕಾರ್ಯಕರ್ತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

