ತುಮಕೂರು

ವಿದ್ಯಾರ್ಥಿ ಶಿಸ್ತು ರೂಢಿಸಿಕೊಂಡರೆ ಜೀವನದಲ್ಲಿ ಯಶಸ್ಸು ಸಾಧ್ಯ: ಪಿಎಸೈ ಘೋರ್ಪಡೆ

Published On :

ಹುಳಿಯಾರು: ವಿದ್ಯಾರ್ಥಿ ಜೀವನ ನಮ್ಮ ಮುಂದಿನ ಬದುಕಿಗೆ ಭದ್ರಬುನಾದಿಯಾಗಿದ್ದು, ಈ ಸಮಯದಲ್ಲಿ ಶಿಸ್ತು, ಸಂಯಮ ಕಲಿತರೆ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಹುಳಿಯಾರು ಪಿಎಸೈ ವೈ. ಘೋರ್ಪಡೆ ಕರೆ ನೀಡಿದರು. ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ನಡೆದ ಕಾಲೇಜು ವಿದ್ಯಾರ್ಥಿಗಳಲ್ಲಿ ಲೈಂಗಿಕ ಅಪರಾಧದ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ಕಾಲೇಜು ಹಂತದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸಾಕಷ್ಟು ಕಲ್ಪನೆಗಳು ಮೂಡುವುದು ಸಹಜ. ಆದರೆ ಆ ಕಲ್ಪನೆಗಳು ಮತ್ತೊಬ್ಬರಿಗೆ ತೊಂದರೆಯನ್ನುಂಟು ಮಾಡಬಾರದು ಎಂದರು. ಮಹಿಳೆಯರ ಹಿತ ರಕ್ಷಣೆಗಾಗಿ ಸಾಕಷ್ಟು ಕಾನೂನುಗಳಿದ್ದು, ಅದರಡಿ ತಪ್ಪಿತಸ್ಥರಿಗೆ ಶಿಕ್ಷೆವಿಧಿಸಲಾಗುತ್ತದೆ. ಯಾವುದೇ ಸಮಸ್ಯೆಗಳಿದ್ದರೂ ಇಲಾಖೆಯನ್ನು ಸಂಪರ್ಕಿಸುವಂತೆ 08133-268245, ಮಹಿಳಾಸಾಂತ್ವಾನ ಕೇಂದ್ರ 9036421593 ಅಥವಾ ಇ-ರಕ್ಷಾದ ಮೂಲಕ ಸಂದೇಶ ಕಳುಹಿಸುವಂತೆ ಕೋರಿದರು. ಸಿಪಿಐ ಜಯಕುಮಾರ್ ಮಾತನಾಡಿ, ಅಪ್ರಾಪ್ತರ ಮೇಲೆ ಅತ್ಯಾಚಾರ ನಡೆಯುತ್ತಿರುವ ಬಗ್ಗೆ ಜಾಗೃತಿ ಮೂಡಿಸಲು ಶಾಲಾಕಾಲೇಜುಗಳಲ್ಲಿ ಸಭೆಗಳನ್ನು ಮಾಡಿ ವಿದ್ಯಾರ್ಥಿಗಳಿಗೆ ತಿಳುವಳಿಕೆ ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದರು. ಪ್ರಾಂಶುಪಾಲ ಡಿ. ದೇವಿರಮ್ಮ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಯತೀಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪನ್ಯಾಸಕ ಸಯ್ಯದ್ ಇಬ್ರಾಹಿಂ, ಶಿವಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.