ಆಸ್ಪತ್ರೆಯಲ್ಲಿ ದಲಿತರಿಗೆ ಚಿಕಿತ್ಸೆ ಸಿಗುತ್ತಿಲ್ಲ: ಮುಖಂಡರ ಆರೋಪ
ತಿಪಟೂರು: ಪಟ್ಟಣದ ಬಾಪೂಜಿ ಹಾಸ್ಟೆಲ್ನಲ್ಲಿ ಸರಿಯಾದ ಕಟ್ಟಡ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪ್ರಾಣಿಗಳಂತೆ ವಿದ್ಯಾಭ್ಯಾಸ ಮಾಡುತ್ತಿದ್ದು ಸರಿಯಾದ ಸ್ನಾನಗೃಹ, ಶೌಚಾಲಯದ ವ್ಯವಸ್ಥೆ ಇಲ್ಲದೆ ಬೀದಿಯಲ್ಲಿ ಸ್ನಾನ ಮಾಡುತ್ತಿದ್ದು, ಈ ಅವ್ಯವಸ್ಥೆ ಸರಿಪಡಿಸದಿದ್ದರೆ ರಸ್ತೆಯಲ್ಲಿ ಸ್ನಾನ ಮಾಡುವ ಮೂಲಕ ಪ್ರತಿಭಟನೆ ನಡೆಸುವುದಾಗಿ ದಲಿತ ಮುಖಂಡ ಬಜಗೂರು ಮಂಜುನಾಥ್ ಎಚ್ಚರಿಸಿದರು.
ಪಟ್ಟಣದ ತಾ.ಪಂ.ಸಭಾಂಗಣದಲ್ಲಿ ತಹಸೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ದಲಿತ ಕುಂದು ಕೊರತೆಗಳ ಸಭೆಯಲ್ಲಿ ಮಾತನಾಡಿದ ಅವರು ಅಧಿಕಾರಿಗಳು ಗೈರು ಹಾಜರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ,ದಲಿತ ಮುಖಂಡರು ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ, ವರ್ಗಗಳ ಮೀಸಲು ಹಣ 22.75ರಷ್ಟು ಬಾರಿ ಪ್ರಮಾಣದಲ್ಲಿ ದುರುಪಯೋಗವಾಗಿದ್ದು, ಕೂಡಲೇ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಂ. ಶಾಂತಪ್ಪ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅನಗತ್ಯ ಕಾರಣ ನೀಡಿ ದಲಿತರ ಕೆಲಸ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕ್ರಮಕೈಗೊಳ್ಳಿ: ತಿಪಟೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಬಡ ಜನರಿಗೆ ದೊರೆಯುತ್ತಿಲ್ಲ. ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳನ್ನು ಕಳಿಸುತ್ತ ಪ್ರತ್ಯೇಕ ನರ್ಸಿಂಗ್ ಹೋಂಗಳಲ್ಲಿ ಚಿಕಿತ್ಸೆ ನೀಡಿ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಸಭೆಯಲ್ಲಿ ಭಾರಿ ಆಕ್ಷೇಪ ವ್ಯಕ್ತವಾಯಿತು. ಸರ್ಕಾರಿ ಆಸ್ಪತ್ರೆ ವೈದ್ಯ ರೊಬ್ಬರು ಹೆರಿಗೆಯೊಂದಕ್ಕೆ 12ಸಾವಿರ ರು. ಕೇಳಿದ ಬಗ್ಗೆ ಮದಕರಿನಾಯಕ ಸೇನೆ ಅಧ್ಯಕ್ಷ ಜಯಸಿಂಹ ವಿವರಿಸಿ ಕ್ರಮಕೈಗೊಳ್ಳಲು ಒತ್ತಾಯಿಸಿದರು. ಈ ಬಗ್ಗೆ ಕ್ರಮಕೈಗೊಂಡು ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಎಲ್ಲ ಸದಸ್ಯರೂ ಒತ್ತಾಯಿಸಿದರು.
ದಲಿತ ಮುಖಂಡ ಟಿ.ಆರ್.ರಘುಪತಿ ಹಳ್ಳಿಗಳಲ್ಲಿ ಅಕ್ರಮ ಮದ್ಯಮಾರಾಟ ಸರಾಗವಾಗಿ ನಡೆಯುತ್ತಿದ್ದು ದಲಿತ ಕೇರಿಗಳು ಮದ್ಯ ಮಾರಾಟದ ಮಾರುಕಟ್ಟೆಗಳಾಗಿವೆ ಎಂದು ಆರೋಪಿಸಿ ಅಬಕಾರಿ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು. ಮತ್ತು ಪ್ರತಿ ಬಾರ್ ಮುಂದೆ ದರಪಟ್ಟಿ ಪ್ರಕಟಿಸಿ ಅದರಂತೆ ವ್ಯಾಪಾರ ಮಾಡಬೇಕೆಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

