ತುಮಕೂರು

ದಾಖಲಾತಿ ನಾಪತ್ತೆ: ಕ್ರಮಕ್ಕೆ ಆಗ್ರಹ

Published On :

ತುರುವೇಕೆರೆ: ಸಮೀಪದ ಕೊಂಡಜ್ಜಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 97-98 ನೇ ಸಾಲಿನಿಂದ 2006-2007 ರವರೆಗೆ ಶಾಲೆಯಲ್ಲಿ ಓದಿರುವ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ದಾಖಲೆಗಳು ನಾಪತ್ತೆಯಾಗಿರುವ ಕುರಿತು ಮುಖ್ಯಶಿಕ್ಷಕರನ್ನು ಅಮಾನತು ಮಾಡಬೇಕು ಎಂದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಂಗೇಗೌಡ ಶಿಕ್ಷಣ ಇಲಾಖಾ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
 ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಅಧಿಕಾರ ವಹಿಸಿಕೊಂಡಿರುವ ಎಂ.ಬಿ.ದಯಾನಂದ್ ಅವರು ಹಿಂದಿನ ನಿವೃತ್ತ ಮುಖ್ಯ ಶಿಕ್ಷಕರಿಂದ ಎಲ್ಲಾ ದಾಖಲಾತಿಗಳನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ದಾಖಲೆಗಳಲ್ಲಿ ನಮೂದಿಸಿದ್ದಾರೆ. ಶಾಲೆಯಲ್ಲಿ ವ್ಯಾಸಾಂಗ ಮಾಡಿರುವ ಎಸ್.ರತ್ನ ಅವರ 1997-98 ರಿಂದ 2006 - 2007 ರ ದಾಖಲೆಗಳನ್ನು ಕೇಳಲಾಗಿ ಮುಖ್ಯ ಶಿಕ್ಷಕರು ದಾಖಲೆ ಇಲ್ಲವೆಂದು ತಿಳಿಸಿದ್ದಾರೆ. ಈ ಪ್ರಕರಣದಿಂದಾಗಿ ದಾಖಲೆ ಕಳೆದು ಹೋಗಿರುವ ವಿಷಯ ಬಯಲಿಗೆ ಬಂದಿದೆ.  ಆದ್ದರಿಂದ ದಾಖಲೆಯನ್ನು ಕಳೆದಿರುವ ಮುಖ್ಯ ಶಿಕ್ಷಕ ದಯಾನಂದ್ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿನಿ ರತ್ನಾರ ಸಂಪೂರ್ಣ ದಾಖಲಾತಿಗಳನ್ನು ಮುಖ್ಯಶಿಕ್ಷಕರು ಒದಗಿಸಿಕೊಡಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ರಂಗೇಗೌಡ ಆಗ್ರಹಿಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.