ತುಮಕೂರು

ನೇತ್ರಾ ಹರಿಸಲು ವೀರೇಂದ್ರ ಹೆಗ್ಗಡೆ ಮನಸ್ಸು ಮಾಡಲಿ

Published On :

ಕುಣಿಗಲ್:  ತಾಲೂಕು ಸೇರಿದಂತೆ ಜಿಲ್ಲೆಗೆ ಹರಿಸಲಾಗುತ್ತಿರುವ ಹೇಮಾವತಿ ನೀರಿನ ಪ್ರಮಾಣ ಸಾಲದ ಕಾರಣ, ನೇತ್ರಾವತಿ ನೀರನ್ನು ಈ ಭಾಗಕ್ಕೆ ಹರಿಸುವ ನಿಟ್ಟಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಮನಸ್ಸು ಮಾಡಬೇಕೆಂದು ಶಾಸಕ ಡಿ.ನಾಗರಾಜಯ್ಯ ತಿಳಿಸಿದರು. ತಾಲೂಕಿನ ಹುಲಿಯೂರುದುರ್ಗದಲ್ಲಿ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೃಷಿ ಇಲಾಖೆ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಕೃಷಿ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಹೇಮಾವತಿ ನಾಲಾ ಯೋಜನೆಯ ಕೊನೆ ಭಾಗದಲ್ಲಿ ಕುಣಿಗಲ್ ತಾಲೂಕು ಇರುವ ಕಾರಣ ನಾಲೆಯಲ್ಲಿ ನೀರು ಹರಿಸಿದರೂ ಈ ಭಾಗಕ್ಕೆ ತಲುಪುತ್ತಿಲ್ಲ. ಆದ್ದರಿಂದ ತಾಲೂಕಿನ ಬಹುಪಾಲು ಕೃಷಿ ಭೂಮಿ ನೀರಾವರಿ ಸೌಲಭ್ಯ ಇಲ್ಲದೆ ಬರಡಾಗುವಂತಾಗಿ, ಕೃಷಿಕರು ವಿಧಿ ಇಲ್ಲದೆ ಪಟ್ಟಣ ಪ್ರದೇಶಕ್ಕೆ ವಲಸೆ ಹೋಗುತ್ತಿದ್ದಾರೆ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.