ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪುನರಾರಂಭ
ಮಧುಗಿರಿ: ಯಾವುದೇ ರಂಗದಲ್ಲಿ ಆಗಲಿ ಬದ್ಧತೆ ಪ್ರದರ್ಶಿಸಿ ಪ್ರಮಾಣಿಕವಾಗಿ ಶ್ರೀಸಾಮಾನ್ಯರಿಗೆ ಸ್ಪಂದಿಸಿ ಕೆಲಸ ಮಾಡಿದರೆ ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಶಾಸಕ ಕೆ.ಎನ್. ರಾಜಣ್ಣ ಅವರಿಗೆ ರಾಜ್ಯ ಸಹಕಾರಿ ರತ್ನ ಪ್ರಶಸ್ತಿ ಲಭಿಸಿರುವುದೇ ಸಾಕ್ಷಿ ಎಂದು ವಿಧಾನಸಭಾ ಉಪ ಸಭಾಪತಿ ಎನ್.ಎಚ್. ಶಿವಶಂಕರರೆಡ್ಡಿ ಅಭಿಪ್ರಾಯಪಟ್ಟರು.
ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಗುಂಡಗಲ್ಲು ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪುನರಾರಂಭ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲೇ ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಂ.1 ಸ್ಥಾನಕ್ಕೇರಲು ಕೆ.ಎನ್.ರಾಜಣ್ಣ ಅವರ ಕಠಿಣ ಪರಿಶ್ರಮ ಅಡಗಿದೆ ಎಂದರು.
ಮುಂದಿನ ದಿನಗಳಲ್ಲಿ ಮಧುಗಿರಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯಾಗಲಿದ್ದು ಲೋಕಸಭಾ ಚುನಾವಣೆ ನಂತರ ಮತ್ತೆ ನಡೆಯುವ ಸಂಪುಟ ವಿಸ್ತರಣೆಯಲ್ಲಿ ಕೆ.ಎನ್.ರಾಜಣ್ಣ ಮಂತ್ರಿ ಆಗುವುದು ಗ್ಯಾರಂಟಿ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಎನ್.ರಾಜಣ್ಣ, ಈ ಸಂಸ್ಥೆ ಗ್ರಾಮೀಣರ ಅಭ್ಯುದಯಕ್ಕೆ ದಾರಿದೀಪ, ಎಲ್ಲರೂ ವ್ಯವಹಾರಕ್ಕಾಗಿ ತಮ್ಮನ್ನು ತಾವು ತೊಡಗಿಸಿ ಕೊಳ್ಳುವ ಜತೆಗೆ ಹೆಚ್ಚು ಅಭಿವೃದ್ಧಿ ಹೊಂದಲು ಸಹಕರಿಸಬೇಕು. ಗ್ರಾಮೀಣ ಜನರ ದೈನಂದಿನ ಜೀವನ ನಿರ್ವಹಣೆಗೆ ಬೇಕಾಗುವ ಎಲ್ಲ ಸಾಮಗ್ರಿ ಇಲ್ಲೇ ದೊರಕುವಂತೆ ಮಾಡಲು ಪ್ರಯತ್ನಿಸಲಾಗುವುದು ಎಂದರು. ಈ ಹಿಂದೆ ಕೂಡ ನಂಬಿಕೆ ಕ್ರಯದಲ್ಲಿ ಜಮೀನು ಅಡಮಾನು ಇಟ್ಟುಕೊಂಡು ರೈತರನ್ನು ವಂಚಿಸುತ್ತಿದ್ದರು. ಶೋಷಣೆ ತಪ್ಪಿಸುವ ಸಲುವಾಗಿ ಸರ್ಕಾರ ಸಹಕಾರ ಸಂಘಗಳನ್ನು ಸ್ಥಾಪಿಸಿ ಗ್ರಾಮೀಣ ಜನರ ಬದುಕಿಗೆ ನೆರವು ಕಲ್ಪಿಸಿದೆ. ಜಿಲ್ಲೆಯಲ್ಲಿ 324 ಗ್ರಾಪಂಗಳಿದ್ದು, 235 ಸಹಕಾರ ಸಂಘಗಳಿವೆ. ಎಲ್ಲ ಪಂಚಾಯಿತಿಯಲ್ಲೂ ಸಹಕಾರ ಸಂಘ ತೆರೆಯುವ ಗುರಿಯಿದ್ದು ಸಮಾಜದಲ್ಲಿ
ತುಳಿತಕ್ಕೊಳಗಾದ ಜನರನ್ನು ಮುಖ್ಯ ವಾಹಿನಿಗೆ ತರುವ ಮೂಲಕ ಸ್ವಾಭಿಮಾನದ ಬದುಕು ಸಾಗಿಸಲು ಅವಕಾಶ ಕಲ್ಪಿಸಲು ಜೆಎಂಜಿ ಸಾಲ ನೀಡುವುದಾಗಿ ಭರವಸೆ ನೀಡಿದರು.
ಜಿ.ಪಂ.ಸದಸ್ಯ ಎಚ್. ಕೆಂಚಮಾರಯ್ಯ, ತುಮುಲ್ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ಪುರಸಭೆ ಅಧ್ಯಕ್ಷ ಎನ್. ಗಂಗಣ್ಣ ಮಾತನಾಡಿದರು. ಜಿ.ಪಂ.ಸದಸ್ಯೆ ಶಾಂತಲಾ ರಾಜಣ್ಣ, ತಾ.ಪಂ.ಅಧ್ಯಕ್ಷೆ ಸುನಂದ ಸಿದ್ದಪ್ಪ,
ಸದಸ್ಯ ಯಶೋಧ ರಾಜಣ್ಣ, ಶಾಂತಮ್ಮ, ಸಹಾಕರ ಸಂಘದ ಅಧ್ಯಕ್ಷ ಪೆದ್ದದಾಸರೆಡ್ಡಿ, ಸಹಕಾರ ಸಂಘಗಳ ಉಪ ನಿಬಂಧಕ ಬಾಲಶೇಖರ್, ಸಹಕಾರ ಸಹಾಯಕ ನಿಬಂಧಕ ತಿಪ್ಪೇಸ್ವಾಮಿ, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಸೀತಾರಾಮು, ಶಾಖಾ ವ್ಯವಸ್ಥಾಪಕಿ ಪುಷ್ಪಲತಾ ಮೊದಲಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

