ಪ್ರಯಾಣಿಕರ ಅನುಕೂಲಕ್ಕಾಗಿ ಹಳೆ ಬಸ್ ನಿಲ್ದಾಣಕ್ಕೆ ಆದ್ಯತೆ ನೀಡಿ
ಪಾವಗಡ: ಬಡವರ ವ್ಯಾಪಾರ ಹಾಗೂ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲು ಸರ್ಕಾರಿ ಬಸ್ಗಳನ್ನು ಪಟ್ಟಣದ ಹಳೇ ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಿ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇತ್ತೀಚಿಗೆ ಪಟ್ಟಣದಲ್ಲಿ ಪುರಸಭೆ ವತಿಯಿಂದ ಕೋಟ್ಯಂತ ರು.ಗಳ ವೆಚ್ಚದಲ್ಲಿ ಹೊಸ ಬಸ್ ನಿಲ್ಧಾಣ ನಿರ್ಮಿಸಿರುವುದು ಸ್ವಾಗತಾರ್ಹ. ಆದರೆ ಹೊಸ ಬಸ್ ನಿಲ್ದಾಣದಲ್ಲಿ ಸರ್ಕಾರಿ ಹಾಗೂ ಖಾಸಗಿ ಬಸ್ಗಳ ತಿಕ್ಕಾಟದಿಂದ ತೀವ್ರ ಸಮಸ್ಯೆ ಎದುರಾಗಿದ್ದು ಸರ್ಕಾರಿ ಬಸ್ಗಳನ್ನು ಹಳೇ ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಿ ಎಂದು ಮನವಿ ಮಾಡಿದ್ದಾರೆ.
ಹಳೇ ಬಸ್ ನಿಲ್ದಾಣದ ಪ್ರದೇಶ ಶ್ರೀ ಶನೇಶ್ವರ ದೇವಸ್ಥಾನದ ಪಕ್ಕದಲ್ಲಿರುವುದರಿಂದ ಹೊಸ ಬಸ್ ನಿಲ್ದಾಣದಿಂದ ದೇವಸ್ಥಾನಕ್ಕೆ ಬರುವ ಪ್ರಯಾಣಿಕರಿಗೆ ಪರದಾಟ ಪಡಬೇಕಿದೆ. ದೇವಸ್ಥಾನಕ್ಕೆ ಬಂದವರು ಹೂವು, ಹಣ್ಣು ಇತರೆ ಕೆಲಸ ಕಾರ್ಯಗಳಿಗೆ ಮತ್ತೆ ಹೊಸ ಬಸ್ ನಿಲ್ದಾಣಕ್ಕೆ ತೆರಳಬೇಕು. ವ್ಯಾಪಾರ, ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಇರುವ ಹಿನ್ನೆಲೆಯಲ್ಲಿ ಖಾಲಿ ಬಿದ್ದಿರುವ ಹಳೇ ಬಸ್ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ಸರ್ಕಾರಿ ಬಸ್ ನಿಲ್ದಾಣದ ವ್ಯವಸ್ಥೆ ಕಲ್ಪಿಸಿ ಬಸ್ಗಳನ್ನು ನಿಯೋಜಿಸಿ ಎಂದು ಶಾಸಕ ಕೆ.ಎಂ. ತಿಮ್ಮರಾಯಪ್ಪ ಹಾಗೂ ಜಿಲ್ಲಾಧಿಕಾರಿಗಳಲ್ಲಿ ಸಾರ್ವಜನಿಕರು ಮನವಿ ಮಾಡಿದ್ದಾರೆ.
ತಾ.ಬಿಜೆಪಿ ಹಿರಿಯ ಮುಖಂಡರಾದ ವಿಜೇಂದ್ರರಾವ್, ಶ್ರೀರಾಮ್ಗುಪ್ತ ಹಾಗೂ ರಾಷ್ಟ್ರೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷ ವಿ. ನಾಗಭೂಷಣರೆಡ್ಡಿ ಇತರರು ಇದಕ್ಕೆ ದನಿಗೂಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

