ಯಾರೂ ಶಾಶ್ವತ ಶತ್ರುಗಳಲ್ಲ, ಮಿತ್ರರೂ ಅಲ್ಲ: ಸುರೇಶ್ ಗೌಡ
ತುಮಕೂರು: ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ. ಮಿತ್ರರೂ ಅಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಅಭಿಪ್ರಾಯಪಟ್ಟರು.
ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಪಟೂರಿಗೆ ತೆರಳುವ ಮಾರ್ಗ ಮಧ್ಯೆ ತುಮಕೂರಿಗೆ ಆಗಮಿಸುವುದಕ್ಕಿಂತಲೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿಯಿಂದ ಅಮಾನತ್ತುಗೊಂಡಿರುವ ಸಂಸದ ಜಿ.ಎಸ್. ಬಸವರಾಜು ಅವರೊಂದಿಗೆ ಮಾತನಾಡುತ್ತಲೇ, ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಮೇಲಿನಂತೆ ಉತ್ತರಿಸಿದರು. ಯಡಿಯೂರಪ್ಪನವರನ್ನು ಸ್ವಾಗತಿಸಲು ಜಿ.ಎಸ್. ಬಸವರಾಜು ಪುತ್ರ ಜ್ಯೋತಿ ಗಣೇಶ್ ಸೇರಿದಂತೆ ಬಹುತೇಕ ಜಿಎಸ್ಬಿ ಬೆಂಬಲಿಗರು ಬಂದಿದ್ದರು. ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರೂ, ಮಾಜಿ ಸಚಿವ ಸೊಗಡು ಶಿವಣ್ಣನವರ ಗೈರು ಹಾಜರಿ ಎದ್ದು ಕಾಣುತ್ತಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

