ವಿಶ್ವದ ಅತ್ಯಂತ ಶಕ್ತಿಶಾಲಿಯಾದ ಅಸ್ತ್ರ ಜ್ಞಾನ
ಕ.ಪ್ರ.ವಾರ್ತೆ ತುಮಕೂರು ಫೆ.2
ಜ್ಞಾನ ಜಗತ್ತಿನಲ್ಲಿ ಅತ್ಯಂತ ಶಕ್ತಿಶಾಲಿಯಾದ ಅಸ್ತ್ರ. ಇದು ಶಿಕ್ಷಣದಿಂದ ಮಾತ್ರ ಪಡೆಯಲು ಸಾಧ್ಯ ಎಂದು ಎಸ್.ಐ.ಟಿ ಕಾಲೇಜಿನ ಯೋಜನೆ ಮತ್ತು ತರಬೇತಿ ವಿಭಾಗದ ಮುಖ್ಯಸ್ಥ ಪ್ರೊ. ಬಸವರಾಜಯ್ಯ ತಿಳಿಸಿದ್ದಾರೆ.
ತುಮಕೂರಿನ ಹಿರೇಹಳ್ಳಿಯಲ್ಲಿರುವ ಪ್ರುಡೆನ್ಸ್ ಇಂಟರ್ ನ್ಯಾಷನಲ್ ಸ್ಕೂಲ್ನ ವಾರ್ಷಿಕೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಜ್ಞಾನ ಸುಲಭವಾಗಿ ದೊರೆಯುವಂತದಲ್ಲ. ಅದನ್ನು ದಕ್ಕಿಸಿಕೊಳ್ಳಬೇಕಾದರೆ ಕಠಿಣ ಪರಿಶ್ರಮ ಅಗತ್ಯ. ನಾರಾಯಣಮೂರ್ತಿ ಸೇರಿದಂತೆ ಹಲವರು ಸತತ ಪರಿಶ್ರಮದಿಂದಾಗಿ ಇಂದು ದೇಶದ ಅತ್ಯುತ್ತಮ ಕಂಪನಿಗಳಾಗಿ ಬೆಳೆಯಲು ಕಾರಣರಾಗಿದ್ದಾರೆ ಎಂದರು.
ಮಕ್ಕಳು ಕಂಪ್ಯೂಟರ್ ಅನ್ನು ಒಂದು ಆಟದ ವಸ್ತುವಾಗಿಯೇ ಬಳಕೆ ಮಾಡುತ್ತಿದ್ದಾರೆ. ಅದರಿಂದ ಮಾಹಿತಿಯನ್ನು ಕಲೆಹಾಕಿ ಅದನ್ನು ತಮ್ಮ ವಿದ್ಯಾರ್ಜನೆಯಲ್ಲಿ ಅಳವಡಿಸಿಕೊಳ್ಳುವ ಬದಲು ವಿಡಿಯೋ ಗೇಮ್ಸ್ಗಳಲ್ಲಿ ಕಾಲ ಕಳೆಯುತ್ತಿದ್ದು, ಈ ಬಗ್ಗೆ ತಂದೆ ತಾಯಿಗಳು ಎಚ್ಚರಿಕೆ ವಹಿಸಬೇಕು. ಅದೇ ರೀತಿ ಶಿಕ್ಷಕರು ಮಕ್ಕಳನ್ನು ಬೌದ್ಧಿಕ ವಿಕಾಸದ ಜೊತೆಗೆ ಮಾನಸಿಕ ವಿಕಾಸಕ್ಕೂ ಒತ್ತು ನೀಡಬೇಕು. ದೈಹಿಕ ಶ್ರಮವಿಲ್ಲದೆ ಇಂದು ಜನರು ಬಹುಬೇಗ ಬೊಜ್ಜಿನಂತಹ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಕ್ರೀಡಾ, ಯೋಗದಂತಹ ಉಪಯುಕ್ತ ಪಠ್ಯೇತರ ಚಟುವಟಿಕೆಯಲ್ಲಿಯೂ ಮಕ್ಕಳು ಪಾಲ್ಗೊಳ್ಳುವಂತೆ ಮಾಡಬೇಕೆಂದು ಸಲಹೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

