10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ
ತುರುವೇಕೆರೆ: 10 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಫೆ.10 ಮತ್ತು 11 ರಂದು ನಡೆಯಲಿದೆ.
ಇದರ ಅಂಗವಾಗಿ ಶಾಸಕ ಎಂ.ಟಿ. ಕೃಷ್ಣಪ್ಪ, ತಹಸೀಲ್ದಾರ್ ನಂಜಪ್ಪ, ತಾಲೂಕು ಕಸಾಪ ಅಧ್ಯಕ್ಷ ಸಾ.ಶಿ.ದೇವರಾಜು, ಸಂಚಾಲಕ ಕೊಂಡಜ್ಜಿ ವಿಶ್ವನಾಥ್ ಹಾಗೂ ಹಣಕಾಸು ಸಮಿತಿ ಅಧ್ಯಕ್ಷ ಬಿ.ಎಸ್. ದೇವರಾಜು ವೇದಿಕೆಯ ಭೂಮಿ ಪೂಜೆ ನೆರವೇರಿಸಿದರು. 10 ನೇ ಜಿಲ್ಲಾ ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತಿ ದೊಡ್ಡರಂಗೇಗೌಡರನ್ನು ಆಯ್ಕೆ ಮಾಡಲಾಗಿದೆ. ದಿವಂಗತ ಕಲ್ಚರ್ ಕೆಮಿಡಿಯನ್ ಕಣತೂರು ಹಿರಣ್ಣಯ್ಯ ಅವರ ಬಯಲು ರಂಗ ಮಂದಿರದ ಮುಂಭಾಗ ಭಾರಿ ವಿಸ್ತಾರದ ವೇದಿಕೆ ಸಿದ್ಧಗೊಳ್ಳುತ್ತಿದೆ. ಸಾಂಸ್ಕೃತಿಕ ಹಾಗೂ ಸಾಹಿತ್ಯದ ತವರೂರಾದ ಇಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಈ ಸಾಹಿತ್ಯ ಸಮ್ಮೇಳನದಲ್ಲಿ ಕೃಷಿ, ನೆಲ, ಜಲ, ಶಿಕ್ಷಣ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಒಳಗೊಂಡಂತೆ ರಾಜ್ಯದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಸಮ್ಮೇಳನದಲ್ಲಿ ಪುಸ್ತಕ ಮಳಿಗೆ, ವಸ್ತು ಪ್ರದರ್ಶನ, ಚಿತ್ರಕಲಾ ಪ್ರದರ್ಶನ, ಸ್ತಬ್ಧ ಚಿತ್ರಗಳ ಪ್ರದರ್ಶನ, ಕೃಷಿ ವಸ್ತು ಪ್ರದರ್ಶನ, ಗ್ರಾಮೀಣ ಸೊಗಡು ಬಿಂಬಿಸುವ ಕಲಾ ಪ್ರದರ್ಶನಗಳು ಇರುವವು. ಸಾಹಿತ್ಯ ಸಮ್ಮೇಳನದ ನೆನಪಿಗಾಗಿ ಚಂಪಕ ಎಂಬ ಸ್ಮರಣ ಸಂಚಿಕೆಯನ್ನೂ ಬಿಡುಗಡೆ ಮಾಡಲಾಗುತ್ತದೆ. ಸಮ್ಮೇಳನಕ್ಕೆ ಬರಲು ಇಚ್ಛಿಸುವ ಜಿಲ್ಲೆಯ ಎಲ್ಲಾ ಶಿಕ್ಷಕರಿಗೆ ಓಓಡಿ ಸೌಲಭ್ಯ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

