ತುಮಕೂರು

ನನ್ನ ಬೆಂಬಲಿಗರಿಗೆ ಸ್ಥಾನ ಬೇಕು: ಬಿಎಸ್ವೈ

Published On :

ತುಮಕೂರು: ನನಗೇನು ಬೇಡ. ಆದರೆ ನನ್ನ ಬೆಂಬಲಿಗರಿಗೆ ಬಿಜೆಪಿಯಲ್ಲಿ ಸ್ಥಾನ-ಮಾನ ಬೇಕು. ಇದು ನನ್ನ ಆಸೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಅವರು ಗುಬ್ಬಿ, ತಿಪಟೂರಿಗೆ ತೆರಳುವ ಮಾರ್ಗ ಮಧ್ಯೆ, ತುಮಕೂರಿನ ಟೌನ್ಹಾಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ವೈಯಕ್ತಿಕವಾಗಿ ತಾವು ಯಾವುದೇ ಸ್ಥಾನ-ಮಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ ಯಡಿಯೂರಪ್ಪ,
ತಮ್ಮ ಬೆಂಬಲಿಗರ ಪರ ವಕಾಲತ್ತು ವಹಿಸಿ ಮಾತನಾಡಿದರು. ತುಮಕೂರು ಬಿಜೆಪಿ ಸಂಸದ ಜಿ.ಎಸ್. ಬಸವರಾಜು ಒಳ್ಳೆಯ ಕೆಲಸ ಮಾಡಿದ್ದಾರೆ. ಹೀಗಾಗಿ ಅವರೇ ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗುವುದು ಒಳ್ಳೆಯದು ಎಂದು ತಮ್ಮ ಕಟ್ಟಾ ಬೆಂಬಲಿಗ ಜಿಎಸ್ಬಿ ಪರ ವಕಾಲತ್ತು ವಹಿಸಿದರು.
ಸಂಸದ ಜಿ.ಎಸ್. ಬಸವರಾಜು ಅವರಿಗೆ ಬಿಜೆಪಿ ಟಿಕೆಟ್ ನೀಡುವುದು ಬೇಡ ಎಂದು ತುಮಕೂರು ಜಿಲ್ಲಾ ಬಿಜೆಪಿ ಘಟಕ ತೀರ್ಮಾನ ಮಾಡಿ, ಹೈಕಮಾಂಡ್ಗೂ ತಿಳಿಸಿದೆಯಲ್ಲಾ ಎಂಬ ಪ್ರಶ್ನೆಗೆ, ಜಿಎಸ್ಬಿ ವಿಷಯವನ್ನು ಮಾತುಕತೆ ಮೂಲಕ ಬಗೆಹರಿಸುವ ವಿಶ್ವಾಸವನ್ನು ಬಿಎಸ್ವೈ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ಗೌಡ,
ತುಮಕೂರು ನಗರ ಬಿಜೆಪಿ ಮುಖಂಡ ಹಾಗೂ ಮಾಜಿ ನಗರಸಭಾ ಸದಸ್ಯ ಕೆ.ಪಿ. ಮಹೇಶ್, ಸಂಸದ ಜಿ.ಎಸ್. ಬಸವರಾಜ್, ಪುತ್ರ ಜ್ಯೋತಿಗಣೇಶ್, ಹೆಬ್ಬಾಕ ರವಿಶಂಕರ್, ವಾಲೆ ಚಂದ್ರಯ್ಯ, ಮಾಜಿ ಶಾಸಕ ಎಚ್. ನಿಂಗಪ್ಪ, ಧನಿಯಾಕುಮಾರ್, ಹಲವಾರು ಮಂದಿ ಬಿಜೆಪಿ ಕಾರ್ಯಕರ್ತರು ಹಲವಾರು ಮುಖಂಡರು ಉಪಸ್ಥಿತರಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.