ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಕೊರಟಗೆರೆ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೂರಾರು ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ವೀರ ಸೇನಾನಿಗಳ ನೆನಪಿನ ಅಂಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ, ಪ್ರಧಾನ ರಸ್ತೆ ಮುಖಾಂತರ ಬೇಡಿಕೆಯ ಘೋಷಣೆ ಕೂಗುತ್ತಾ, ತಾಲೂಕು ಕಚೇರಿಯವರೆಗೂ ಪ್ರತಿಭಟನೆ ನಡೆಸಿದರು.
ಪಡಿತರ ಚೀಟಿ ಇಲ್ಲದವರಿಗೆ ಪಡಿತರ ಚೀಟಿ ನೀಡುವುದಕ್ಕೆ ಸರ್ಕಾರ ಆದೇಶ ಮಾಡಿ 6 ತಿಂಗಳು ಕಳೆದರೂ ಇಲ್ಲಿಯವರೆಗೂ ಸುಮಾರು 5-6 ಸಾವಿರ ಪಡಿತರ ಚೀಟಿ ನೀಡದೆ ಇರುವುದು ಸಾರ್ವಜನಿಕರಿಗೆ ತುಂಬ ತೊಂದರೆಯಾಗಿರುವುದರಿಂದ ಇದನ್ನು ಅತಿ ಶೀಘ್ರದಲ್ಲೆ ನೀಡಬೇಕು ಎಂದು ಆಗ್ರಹಿಸಿದರು.
ಬಸವವಸತಿ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ 3 ತಿಂಗಳು 6 ತಿಂಗಳು ಆದರೂ ಸಕಾಲಕ್ಕೆ ಬಿಲ್ಲು ಪಾವತಿ ಮಾಡುತ್ತಿಲ್ಲ. ಈ ಕೂಡಲೇ ಫಲಾನುಭವಿಗಳಿಗೆ ಮನೆ ಬಿಲ್ ಪಾವತಿ ಮಾಡುವುದು.
ಬಗರ್ ಹುಕುಂ ಸಾಗುವಳಿದಾದರು 20-30 ವರ್ಷ ಸಾಗುವಳಿ ಮಾಡಿಕೊಂಡು ಬಂದಿದ್ದರೂ ಕೂಡ ಅವರಿಗೆ ಇಲ್ಲಿಯವರೆಗೂ ಯಾವುದೇ ಸಾಗುವಳಿ ಚೀಟಿ ನೀಡಿಲ್ಲ. ಈ ಕೂಡಲೇ ಎಲ್ಲಾ ಸಾಗುವಳಿದಾರರಿಗೆ ಸಾಗುವಳಿ ಚೀಟಿ ನೀಡತಕ್ಕದ್ದು. ವೃದ್ಧರು, ಅಂಗವಿಕಲರು, ವಿಧವೆಯರಿಗೆ ಸಲ್ಲಿಸಿರುವ ಪೆನ್ಷನ್ ಅನ್ನು ಕೂಡಲೇ ನೀಡಿ ಹೊಸತಾಗಿ ಅರ್ಜಿ ಹಾಕಿರುವವರಿಗೆ ಕೂಡಲೇ ಆರ್ಡರ್ ಕಾಫಿ ನೀಡಬೇಕೆಂದು ತಿಳಿಸಿದರು.
ಕೊರಟಗೆರೆ ತಾಲೂಕಿನಲ್ಲಿ ಸಕಾಲಕ್ಕೆ ಸರಿಯಾಗಿ ಮಳೆಬೆಳೆ ಇಲ್ಲದೆ ರೈತರು, ಸಾರ್ವಜನಿಕರು, ಸಂಕಷ್ಟದಲ್ಲಿದ್ದಾರೆ. ಆದುದರಿಂದ ಈ ಕೂಡಲೇ ಎತ್ತಿನಹೊಳೆ ಯೋಜನೆಯನ್ನು ಜಾರಿ ಮಾಡುವುದು. ತಾಲೂಕಿನ ಎಲ್ಲಾ ಗ್ರಾ.ಪಂ ಮಟ್ಟದಲ್ಲಿ ಕುಡಿಯುವ ನೀರು ಹಾಗೂ ಮೂಲ ಸೌಲಭವನ್ನು ಒದಗಿಸಬೇಕು ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ವಿದ್ಯೆಯನ್ನು ರಾಷ್ಟ್ರೀಕರಣಗೊಳಿಸಿ, ಹಾಗೂ ಏಕರೂಪ ಮತ್ತು ಸಮಾನ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ, ಸಂವಿಧಾನದ ಕಲಂ 45 ರಂತೆ ಸರ್ವಜಾತಿಯ ಭಾರತೀಯ ಮಕ್ಕಳೆಲ್ಲರಿಗೂ ಉಚಿತ ಶಿಕ್ಷಣ ನೀಡಬೇಕು. ದೇಶದ ಭೂಮಿಯನ್ನು ರಾಷ್ಟ್ರೀಕರಣಗೊಳಿಸಿ ಸಹಕಾರ ಪದ್ದತಿಯಲ್ಲಿ ಭಾರತೀಯ ಪ್ರತಿ ಒಬ್ಬ ಪ್ರಜೆಗೂ ಭೂಮಿ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.
ತಾಲೂಕು ಕಚೇರಿ ಆವರಣದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಬೇಕು. ಈ ಎಲ್ಲಾ ಬೇಡಿಕೆಗಳನ್ನು ಅತಿ ಶೀಘ್ರದಲ್ಲೆ ಈಡೇರಿಸಬೇಕೆಂದು ತಹಸೀಲ್ದಾರ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಪ್ರತಿಭಟನೆ ನೇತೃತ್ವವನ್ನು ಕೋದಂಡರಾಮಯ್ಯ, ಮುದ್ಗಂಗಯ್ಯ, ನರಸಿಂಹಮೂರ್ತಿ, ರಂಗಶಾಮಯ್ಯ ಮುಂತಾದವರು ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

