ಚಿಕ್ಕನಾಯಕನಹಳ್ಳಿ ಧಾರ್ಮಿಕ ಕಾರ್ಯಕ್ರಮದಲ್ಲಿ ಬಿಎಸ್ವೈ
ಚಿಕ್ಕನಾಯಕನಹಳ್ಳಿ: ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಇಲ್ಲಿಗೆ ಭಾನುವಾರ ಆಗಮಿಸಿದ್ದರು. ಆ ಸಂದರ್ಭದಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗಳಿಂದ ಸಿಡಿಮಿಡಿಗೊಂಡ ಘಟನೆ ನಡೆಯಿತು. ಅವರು ತಾಲೂಕಿನ ಹಂದನಕೆರೆ ಬಳಿಯ ಶ್ರೀಗಿರಿಸಿದ್ದೇಶ್ವರ ಬೆಟ್ಟದ ತಪ್ಪಲಿನಲ್ಲಿ ಪ್ರತಿಷ್ಟಾಪಿಸಿರುವ ತುಮಕೂರು ಲೋಕಸಭೆ ಅಭ್ಯರ್ಥಿ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸುವಾಗ ಘಟನೆ ನಡೆಯಿತು. 2014ರ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಿಂದ ಅಭ್ಯರ್ಥಿ ಯಾರಾಗಬಹುದು ಎಂದು ಪ್ರಶ್ನಿಸಿದಾಗ ತಕ್ಷಣ ಬಿಎಸ್ವೈ ಅವರು ಹಾಲಿ ಸಂಸದರು ಕಳೆದ ಬಾರಿ ತುಂಬ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಆದ್ದರಿಂದ ಪುನಃ ಅವರನ್ನೇ ಅಭ್ಯರ್ಥಿಯಾಗಿಸುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಉತ್ತರಿಸಿದರು. ಆದರೆ ಬಿಜೆಪಿಯಲ್ಲಿ ಬಸವರಾಜು ಬಗ್ಗೆ ಬಹಳ ವಿರೋಧ ವ್ಯಕ್ತವಾಗುತ್ತಿದ್ದು, ಒಂದು ವೇಳೆ ಬಲವಂತದಿಂದ ಅಭ್ಯರ್ಥಿಯನ್ನು ಹೇರಿದರೆ ಸೋಲುವುದು ಖಚಿತ ಎಂದು ಕಾರ್ಯಕರ್ತರು ಬಹಿರಂಗವಾಗಿ ತಮ್ಮ ಅಸಮಾಧಾನ ತೋರುತ್ತಿದ್ದಾರೆ. ಹೀಗಿದ್ದಾಗ್ಯೂ ನೀವು ಅವರನ್ನೇ ಅಭ್ಯರ್ಥಿ ಮಾಡಲು ಹಠಹಿಡಿಯುವ ಕಾರಣವೇನು ಎಂದು ಪ್ರಶ್ನಿಸಿದರು. ಆಗ ಬಿಎಸ್ವೈ ಅವರುಕೆಲವು ಮಂದಿ ಕಾರ್ಯರ್ಕರ ಅಸಮಾಧಾನವಿದ್ದು ಅದನ್ನು ಶೀಘ್ರದಲ್ಲಿ ಬಗೆಹರಿಸಲಾಗುವುದು ಎಂದರು. ಇದೇ ಸಂಸದರು ಕಾಂಗ್ರೆಸ್ನಿಂದ ಉಮೇದುವಾರಿಕೆಗೆ ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ತುಮಕೂರಿನಿಂದ ಬಿ.ಎಸ್.ಯಡಿಯೂರಪ್ಪನವರು ಸ್ಪರ್ಧಿಸಿದರೆ ಏನು ಮಾಡುತ್ತೀರಿ ಎಂದು ಪ್ರಶ್ನಿಸಿದಾಗ ಯಡಿಯೂರಪ್ಪನವರು ಎದುರೇ ಸ್ಪರ್ಧಿಸುತ್ತೇನೆ ಎಂದು ಉತ್ತರಿಸಿದ್ದರು. ಅಂತಹ ವ್ಯಕ್ತಿಯ ಬಗ್ಗೆ ನಿಮಗೆ ಏಕೆ ವ್ಯಾಮೋಹ, ಕಾರ್ಯಕರ್ತರ ವಿರೋಧ ಕಟ್ಟಿಕೊಂಡು ಅವರಿಗೆ ಟಿಕೆಟ್ ಕೊಡಿಸುವ ಹಠವೇಕೆ ಎಂದಾಗ ಅವರು ತಾಳ್ಮೆ ಕಳೆದುಕೊಂಡು ಕೋಪಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

