'ಚುನಾವಣೇಲಿ ಬಿಜೆಪಿ ಹುರುಪು ಇಮ್ಮಡಿ'
ಹುಳಿಯಾರು: ಇಂದು ದೇಶಾದ್ಯಂತ ಮೋದಿ ಅಲೆ ಎದ್ದಿರುವುದರ ಜೊತೆ ಬಿಜೆಪಿ ಹುರುಪು ಹೆಚ್ಚಾಗಿದೆ. ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯುವಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಹುಳಿಯಾರಿನ ಮಾಜಿ ಶಾಸಕ ಕೆ.ಎಸ್.ಕಿರಣ್ಕುಮಾರ್ ಅವರ ಮನೆಗೆ ಭಾನುವಾರ ಭೇಟಿ ನೀಡಿದಾಗ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆಯುತ್ತದೆ. ಅದಕ್ಕೆ ಜನ ಬೆಂಬಲವಿದೆ, ಆಡಳಿತ ಪಕ್ಷದ ಕಾರ್ಯವೈಖರಿಯನ್ನು ಮತದಾರರು ಗಮನಿಸಿದ್ದಾರೆ ಎಂದರು. ಗುಜರಾತ್ನಲ್ಲಿ ಮೋದಿ ಕೈಂಗೊಂಡಿರುವ ಅಭಿವೃದ್ಧಿ ಕಾರ್ಯಗಳು ದೇಶದ ಅಭಿವೃದ್ಧಿಗೆ ಪೂರಕವಾಗಿವೆ. ಅಂತೆಯೇ ದೇಶಾದ್ಯಂತ ಬಿಜೆಪಿ ಪಕ್ಷ ಪ್ರಬಲವಾಗಿದೆ ಎಂದರು. ಇತರ ಯಾವುದೇ ಪಕ್ಷದವರು ತಮ್ಮ ಬಗ್ಗೆ ಯಾವ ರೀತಿ ಮಾತನಾಡಲಿ, ಅವರಿಗೆ ಚುನಾವಣೆಯ ಬಳಿಕ ಉತ್ತರ ಸಿಗಲಿದೆ ಎಂದರು. ಈ ಸಂದರ್ಭದಲ್ಲಿ ಸಂಸದ ಜಿ.ಎಸ್. ಬಸವರಾಜು, ಶಾಸಕ ಸುರೇಶ್ ಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

