ತಾಲೂಕು ಅಬಕಾರಿ ಇಲಾಖೆಗಳ ವಿರುದ್ಧ ಪ್ರತಿಭಟನೆ: ಲೋಕೇಶ್ವರ
ತಿಪಟೂರು: ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದು, ದಲಿತರು, ಹಿಂದುಳಿದ ವರ್ಗದ ಜನ ಸಾಮಾನ್ಯರ ಸಂಸಾರವು ಬೀದಿ ಪಾಲಾಗುತ್ತಿದ್ದರೂ ಜಿಲ್ಲಾ ಅಬಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ನಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲವೆಂಬಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡಲೋಕೇಶ್ವರ ಆರೋಪಿಸಿದರು.
ತಾಲೂಕು ಅಬಕಾರಿ ಇಲಾಖೆಯವರೊಂದಿಗೆ ಒಳ ಒಪ್ಪಂದ ಮಾಡಿಕೊಳ್ಳುವ ಮೂಲಕ ಬಡವರ, ದಲಿತರ, ಕೂಲಿಕಾರ್ಮಿಕರ ಬದುಕಿನೊಂದಿಗೆ ಚಲ್ಲಾಟವಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕು ಮಟ್ಟದ ಕೆಲ ಮದ್ಯದ ಅಂಗಡಿ ಮಾಲೀಕರು ಪ್ರತಿ ಹಳ್ಳಿಗೂ ಮದ್ಯವನ್ನು ಅಕ್ರಮವಾಗಿ ಸರಬರಾಜು ಮಾಡುತ್ತಿರುವುದು ಅಬಕಾರಿ ಇಲಾಖೆಗೆ ತಿಳಿದಿದ್ದು ಇದು ಬೇಲಿಯೇ ಎದ್ದು ಹೊಲ ಮೆಯ್ದಂತಾಗಿದೆ. ಕಾನೂನು ಬಾಹಿರವಾಗಿ ಹಳ್ಳಿಯ ಅಂಗಡಿಗಳವರು ಮದ್ಯ ಮಾರಾಟ ಮಾಡುತ್ತಿದ್ದರೂ, ಅಬಕಾರಿ ಇಲಾಖೆ ಕಾನೂನು ಕ್ರಮ ತೆಗೆದುಕೊಳ್ಳದೇ ಕಣ್ಣು ಮುಚ್ಚಿಕೊಂಡು ಮಾಮೂಲಿಗೆ ಕೈ ಒಡ್ಡುತ್ತಿರುವುದು ತೀರಾ ನಾಚಿಕೆಗೇಡಿನ ಸಂಗತಿಯಾಗಿದೆ. ಈ ರೀತಿ ಜಿಲ್ಲೆಯಾದ್ಯಂತ ಅಬಕಾರಿ ಇಲಾಖೆಯವರ ಕರ್ತವ್ಯ ಭ್ರಷ್ಟತೆ ದಿನೇ ದಿನೇ ಹೆಚ್ಚುತ್ತಿದ್ದು ಇದರಿಂದ ಅನೇಕ ಸಂಸಾರಗಳು ಆರ್ಥಿಕ ಸಂಕಷ್ಟಗಳಿಗೆ ಗುರಿಯಾಗಿರುವುದಲ್ಲದೆ ಕೆಲವರು ದೌರ್ಜನ್ಯಕ್ಕೊಳಗಾಗುತ್ತಿರುವ ಬಗ್ಗೆ ಲೋಕೇಶ್ವರ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕೂಡಲೆ ಜಿಲ್ಲಾ ಅಬಕಾರಿ ಅಧಿಕಾರಿಗಳು ತಾಲೂಕು ಅಬಕಾರಿ ಅಧಿಕಾರಿಗಳ ಮೇಲೆ ಹಾಗೂ ಅಕ್ರಮ ಮದ್ಯದಂಗಡಿ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಂಡು ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ತಡೆ ಹಿಡಿಯದಿದ್ದರೆ ತಾಲೂಕು ಅಬಕಾರಿ ಇಲಾಖೆಗಳ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳುವುದೆಂದು ಲೋಕೇಶ್ವರ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

