ಗ್ರಾಮೀಣ ಬಡವರ ಸಂಘಟನೆಯಾಗಲಿ
ತುಮಕೂರು: ಸಿಐಟಿಯು ಸಂಘಟನೆ ಗ್ರಾಮೀಣ ಪ್ರದೇಶದಲ್ಲಿನ ಎಲ್ಲಾ ತರಹದ ಬಡ ಕಾರ್ಮಿಕರನ್ನು ಹಾಗೂ ನೌಕರರನ್ನು ಸಂಘಟಿಸುವ ಮಹತ್ ಕಾರ್ಯದಲ್ಲಿ ಮುಂದಾಗಿದೆ ಎಂದು ಸಂಪಿಗೆ ಗ್ರಾಪಂ ಮಾಜಿ ಅಧ್ಯಕ್ಷ ಸಂಪಿಗೆ ಶ್ರೀಧರ್ ತಿಳಿಸಿದರು.
ಅವರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸಮಿತಿ ವತಿಯಿಂದ ಇತ್ತೀಚಿಗೆ ತುರುವೇಕೆರೆ ತಾಲೂಕು, ಸಂಪಿಗೆ ಗ್ರಾಮದ ಶ್ರೀನಿವಾಸ ದೇವಾಲಯ ಮುಂಭಾಗದಲ್ಲಿ ಕಟ್ಟಡ ಕಾರ್ಮಿಕರ ಸಮಾವೇಶ ಹಾಗೂ ಗುರುತು ಚೀಟಿ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಇಂತಹ ಸಂಘಟನೆಯಲ್ಲಿ ಎಲ್ಲಾ ಕಾರ್ಮಿಕರರು ಸಂಘಟಿತಗೊಂಡು ತಮ್ಮ ಹಕ್ಕುಗಳನ್ನು ಪಡೆಯುವುದರ ಜೊತೆ ಕರ್ತವ್ಯಗಳನ್ನು ಮರೆಯದೆ ಪಾಲಿಸಬೇಕೆಂದು ಕರೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿದ ಕಟ್ಟಡ ಕಾರ್ಮಿಕ ಸಂಘಟನೆ ಜಿಲ್ಲಾ ಸಹಕಾರ್ಯದರ್ಶಿ ರಾಮಣ್ಣ ಮಾತನಾಡಿ, ಶ್ರಮವಹಿಸಿ ದುಡಿಯುವ ಕಾರ್ಮಿಕರು ತಮ್ಮಲ್ಲಿ ತಿಳುವಳಿಕೆ ಹೆಚ್ಚಿಸಿಕೊಳ್ಳಬೇಕು. ತಮ್ಮ ತಮ್ಮ ಸುತ್ತಲಿನ ಗ್ರಾಮಗಳಲ್ಲಿರುವ ಕಟ್ಟಡಕಾರ್ಮಿಕರನ್ನು ಸಂಘಟಿಸುವ ಜವಾಬ್ದಾರಿ ವಹಿಸಿ ಕಲ್ಯಾಣ ಮಂಡಳಿಯಿಂದ ದೊರೆಯುವ 11 ಸೌಲಭ್ಯಗಳನ್ನು ಪಡೆಯಬೇಕೆಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿ.ಡಬ್ಲ್ಯೂ.ಎಫ್.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಉಮೇಶ್ ಕಾರ್ಮಿಕರು ಕೇವಲ ಆರ್ಥಿಕ ಸೌಲಭ್ಯಗಳಿಗಷ್ಟೆ ಒಂದುಗೂಡದೆ ಸಮಾಜದಲ್ಲಿರುವ ಭ್ರಷ್ಟಾಚಾರ ಮೂಡನಂಬಿಕೆ, ಬೆಲೆಏರಿಕೆಯಂತಹ, ಜನವಿರೋಧಿ ಸಮಸ್ಯೆಗಳ ಪರಿಹಾರಕ್ಕೆ ಚಳುವಳಿ ನಡೆಸಬೇಕು.
ಜಾಗತೀಕರಣದ ಬಿರುಗಾಳಿಯಲ್ಲಿ ನಶಿಸುತ್ತಿರುವ ಶ್ರಮಾದಾರಿತ ಜನಪದ ಕಲೆಗಳನ್ನು ಉಳಿಸಿ ಬೆಳೆಸಲು ಮುಂದಾಗಬೇಕೆಂದರು. ಸಂಪಿಗೆ ಗ್ರಾಮಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನಾಗರಾಜು, ಗ್ರಾಮದ ಮುಖಂಡರಾದ ರೇಣುಕಾರಾಧ್ಯ, ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಗುರುತುಚೀಟಿ ವಿತರಿಸಿ ಮಾತನಾಡಿದರು. ಜಿಲ್ಲಾ ಮುಖಂಡರಾದ ಲಕ್ಷ್ಮಣ್, ರಾಮಚಂದ್ರ, ದಂಡಿನಶಿವರ ಹೋಬಳಿ ಅಧ್ಯಕ್ಷ ಮಲ್ಲೇಶಯ್ಯ, ಗೌರವ ಅಧ್ಯಕ್ಷ ಗಂಗಣ್ಣ, ಸಂಪಿಗೆ ಶಾಖೆಯ ಸಂಚಾಲಕ ಬಿ.ಕೆ.ಶಿವರಾಜು ವೇದಿಕೆಯಲ್ಲಿದ್ದರು. ಸಹ ಸಂಚಾಲಕ ಕೆ.ಬಿ. ಮೋಹನ್ ಕುಮಾರ್, ಸ್ವಾಗತಿಸಿ ವೇದಮೂರ್ತಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

