'ವಿದ್ಯಾರ್ಥಿಗಳು ವಿದ್ಯಾವಂತರಾಗಿ ಕೀರ್ತಿ ತರಲಿ'
ತುಮಕೂರು: ಶಿಕ್ಷಣ ರಾಷ್ಟ್ರದ ರಾಜ್ಯದ ಅಭಿವೃದ್ಧಿಯ ದ್ಯೋತಕವಾಗಿದ್ದು, ವಿದ್ಯಾರ್ಥಿಗಳು ವಿದ್ಯಾವಂತರಾಗಿ ರಾಷ್ಟ್ರಕ್ಕೆ ರಾಜ್ಯಕ್ಕೆ ಕೀರ್ತಿ ತರಬೇಕು ಎಂದು ತುಮಕೂರು ಶಾಸಕ ಡಾ. ರಫೀಕ್ ಅಹಮದ್ ಅವರು ಕರೆ ನೀಡಿದರು.
ಅವರು ನಗರದ ಎಂಪ್ರೆಸ್ ಸರ್ಕಾರಿ ಕಾಲೇಜು ಆವರಣದಲ್ಲಿ ಪ್ರೌಢಶಾಲಾ ಮಕ್ಕಳಿಗೆ ಉಚಿತ ಸೈಕಲ್ ವಿತರಿಸಿ ಮಾತನಾಡಿದರು.
ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದು, 2013-14ನೇ ಸಾಲಿಗೆ 17 ಸಾವಿರ ಕೋಟಿ ರು.ಗಳನ್ನು ಮೀಸಲಿಟ್ಟಿದ್ದು, ಇದು ಶಿಕ್ಷಣ ರಂಗಕ್ಕೆ ಒಂದು ಆಶಾದಾಯಕ ಕೊಡುಗೆಯಾಗಿದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಲಾಭ ಪಡೆದು, ಉನ್ನತ ಶಿಕ್ಷಣ ಪಡೆದು, ಹುಟ್ಟಿದ ನಾಡಿಗೆ, ಮನೆಗೆ ಹೆಸರು ತರಬೇಕು ಎಂದು ಕರೆ ಕೊಟ್ಟರು.
ಹಿಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಹೆಚ್ಚಿನ ಸೌಲಭ್ಯಗಳು ಇರುತ್ತಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ರಾಜ್ಯ ಸರ್ಕಾರ ನೀಡುತ್ತಿದ್ದು, ಅನೇಕ ಯೋಜನೆಗಳೂ ಜಾರಿಗೊಳ್ಳುತ್ತಿದೆ. ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕರು ಕರೆ ನೀಡಿದರು.
ಸಿ.ಇ.ಟಿ. ಸೇರಿದಂತೆ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಇತರೆ ರಾಜ್ಯದ ವಿದ್ಯಾರ್ಥಿಗಳೊಂದಿಗೆ ಎದುರಿಸಬೇಕಾದ ಸಂದರ್ಭ ಎದುರಾಗುವ ಸಾಧ್ಯತೆ ಹಿನ್ನಲೆಯಲ್ಲಿ ರಾಜ್ಯದ ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಬೇಕು ಹಾಗೂ ಉನ್ನತ ಶಿಕ್ಷಣ ಪರೀಕ್ಷೆಗಳಿಗೆ ಸಿದ್ಧತೆ ನಡೆಸಬೇಕು ಎಂದು ಕರೆ ನೀಡಿದರು.
ಜಿ.ಪಂ. ಅಧ್ಯಕ್ಷೆ ಸಾಕಮ್ಮ ಅವರು ಮಾತನಾಡಿ, ಮಕ್ಕಳು ಸಿನಿಮಾ, ಟಿ.ವಿ. ನೋಡುವ ಗೀಳನ್ನು ಬಿಟ್ಟು ಓದಿನ ಕಡೆ ಗಮನ ಹರಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭ ಎಂಪ್ರೆಸ್ ಸರ್ಕಾರಿ ಬಾಲಕಿಯರ ಪ.ಪೂ.ಕಾಲೇಜು ಪ್ರಾಂಶುಪಾಲ ಡಿ.ಮರುಳಯ್ಯ, ಉಪಪ್ರಾಂಶುಪಾಲ ಎಲ್. ಪದ್ಮಾವತಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

