ಕೆಎಸ್ಆರ್ಟಿಸಿ ನಿವೃತ್ತ ನೌಕರರಿಗೆ ಪಿಂಚಣಿ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ
ತುಮಕೂರು: ಕೆಎಸ್ಆರ್ಟಿಸಿ ನಿವೃತ್ತ ನೌಕರರಿಗೆ ಪಿಂಚಣಿ ಮತ್ತು ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ತುಮಕೂರಿನಲ್ಲಿ ಕೆಎಸ್ಆರ್ಟಿಸಿ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ತಾವು ನಿವೃತ್ತಿಯಾಗುವ ಮೊದಲು ಸೇವೆಯಲ್ಲಿದ್ದಾಗ ಕೆಎಸ್ಆರ್ಟಿಸಿ ಸಂಸ್ಥೆಯನ್ನು ಅಭಿವೃದ್ಧಿಪಡಿಸಲು ಶ್ರಮಿಸಿದ್ದೇವೆ. ಸಂಸ್ಥೆ ಹಾಲಿ ಲಾಭದಲ್ಲಿದೆ. ನಮಗೆ ನೀಡುತ್ತಿದ್ದ ವೇತನದಲ್ಲಿ ಪಿಎಫ್ಗಾಗಿ ಹಿಡಿದ ಹಣದಲ್ಲಿ ಈಗ ಕೇವಲ 300 ರಿಂದ 1 ಸಾವಿರ ರು. ಪಿಂಚಣಿ ಬರುತ್ತಿದೆ. ಇದರಿಂದ ಜೀವನ ನಿರ್ವಹಿಸುವುದು ಕಷ್ಟ ಎಂದಿದ್ದಾರೆ ಪ್ರತಿಭಟನಾಕಾರರು.
ಪ್ರಸ್ತುತ ವಸ್ತುಗಳ ಬೆಲೆ ಗಗನಕ್ಕೇರಿರುವ ಸನ್ನಿವೇಶದಲ್ಲಿ ಕೆಎಸ್ಆರ್ಟಿಸಿ ನಿವೃತ್ತ ನೌಕರರು ಸಮಾಜದ ಇತರೆ ನಿವೃತ್ತರಂತೆ ಸಮಾನ ಜೀವನ ನಡೆಸುವುದು ಹಾಗೂ ಕುಟುಂಬದ ಸದಸ್ಯರನ್ನು ಪೋಷಣೆ ಮಾಡುವುದು ಈ ಕಡಿಮೆ ಪಿಂಚಣಿಯಿಂದ ಅಸಾಧ್ಯವಾಗಿದೆ. ಇಂತಹ ಸಮಯದಲ್ಲಿ ನಾವು ಬದುಕಲೂ ಆಗದೆ ಸಾಯಲೂ ಆಗದೇ ಜೀವನ ಸಾಗಿಸುತ್ತಿದ್ದೇವೆ ಎಂದಿದ್ದಾರೆ.
ಆದ್ದರಿಂದ ಅತಿ ಕಡಿಮೆ ಪಿಂಚಣಿ ಪಡೆಯುತ್ತಿರುವ ಕೆಎಸ್ಆರ್ಟಿಸಿ ನಿವೃತ್ತ ನೌಕರರಿಗೆ ಹೆಚ್ಚುವರಿ ನಿವೃತ್ತಿ ವೇತನ ನೀಡಲು ಆದೇಶಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಕೆಎಸ್ಆರ್ಟಿಸಿ ನಿವೃತ್ತ ನೌಕರರು ಎಲ್ಲಾ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ನೀಡಲಾಗಿತ್ತು. ಆದರೆ ಹಿಂದಿನ ಬಿಜೆಪಿ ಸರ್ಕಾರ ಇದನ್ನು ಕಿತ್ತೊಗೆದು ನಗರ ಸಾರಿಗೆ ಬಸ್ಸುಗಳಲ್ಲಿ ಮಾತ್ರ ಪ್ರಯಾಣಿಸಲು ಉಚಿತ ಪಾಸ್ ನೀಡಿದ್ದು ಗ್ರಾಮಾಂತರ ಪ್ರದೇಶದ ನಿವೃತ್ತ ಕೆಎಸ್ಆರ್ಟಿಸಿ ನೌಕರರಿಗೆ ತುಂಬ ಅನ್ಯಾಯವಾಗಿದೆ ಎಂದಿದ್ದಾರೆ.
ಆದ್ದರಿಂದ ಎಲ್ಲಾ ಕೆಎಸ್ಆರ್ಟಿಸಿ ನಿವೃತ್ತ ನೌಕರರು, ಗ್ರಾಮಾಂತರ ಪ್ರದೇಶದ ಸಾರಿಗೆ ನಿಗಮಗಳ ಎಲ್ಲಾ ಬಸ್ಸುಗಳಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸು ನೀಡಲು ಆದೇಶಿಸಬೇಕೆಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

