ರಾಷ್ಟ್ರದ ಭವಿಷ್ಯ ಯುವಜನತೆ ಮೇಲೆ ಅವಲಂಬಿತ: ರಾಮಯ್ಯ
ಕುಣಿಗಲ್: ರಾಷ್ಟ್ರದ ಭವಿಷ್ಯ ಯವಜನತೆಯ ಮೇಲೆ ಅವಲಂಬಿತವಾಗಿದೆ. ಯುವಜನತೆ ಸ್ವಾರ್ಥಪರರಾಗದೆ ಎಚ್ಚರಿಕೆಯಿಂದ ಮುಂದುವರೆದು ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕೆಂದು ಹಿರಿಯ ಪತ್ರಕರ್ತ, ವಿಧಾನಪರಿಷತ್ ಮಾಜಿ ಸದಸ್ಯ ಪಿ.ರಾಮಯ್ಯ ಕರೆ ನೀಡಿದರು.
ಬುಧವಾರ, ಪಟ್ಟಣದ ಮಹಾತ್ಮಗಾಂಧಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳದ ಕಾಲೇಜಿನ ಕಾರ್ಯಕ್ರಮದಲ್ಲಿ ಪ್ರಮುಖ ಉಪನ್ಯಾಸಕರಾಗಿ ಆಗಮಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಉಜ್ವಲವಾದ ಭವಿಷ್ಯವಿದೆ. ಸ್ವಪ್ರಯತ್ನದ ಜೊತೆಗೆ ಉತ್ತಮ ಗುರಿಹೊಂದಿ, ಹಿರಿಯರ, ಗುರುಗಳ ಮಾರ್ಗದರ್ಶನದಲ್ಲಿ ಆ ಗುರಿ ಸಾಧನೆಗೆ ಪಣ ತೊಡಗಬೇಕು. ವಿಷಯವಾರು ಪಠ್ಯಗಳ ಜೊತೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚು ಒತ್ತು ನೀಡಿ ಉತ್ತಮ ಸಾಧನೆ ಮಾಡುವುದರ ಜೊತೆಯಲ್ಲಿ ಸದೃಢ ರಾಷ್ಟ್ರ ನಿರ್ಮಾಣದ ನಿಟ್ಟಿನಲ್ಲಿ ಪ್ರತಿಯೊಬ್ಬರು ಪರಿಣಾಮಕಾರಿ ಪಾತ್ರ ನಿರ್ವಹಿಸಬೇಕೆಂದರು.
ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕ ಡಿ.ನಾಗರಾಜಯ್ಯ, ಪಿಯುಸಿ ಪರೀಕ್ಷೆಗಳು ವಿದ್ಯಾರ್ಥಿಗಳ ಜೀವನದಲ್ಲಿ ನಿರ್ಣಾಯಕ ಪಾತ್ರ ವಹಿಸುವುದರಿಂದ ವಿದ್ಯಾರ್ಥಿಗಳ ಮಾಡುವ ಸಾಧನೆಗೆ ತಕ್ಕಂತೆ ಅವರ ಮುಂದಿನ ಶೈಕ್ಷಣಿಕ ಜೀವನ ನಿರ್ಧರಿತವಾಗುತ್ತದೆ. ಪಿಯು ವ್ಯಾಸಂಗದ ಸಮಯದಲ್ಲಿ ಸಹಜವಾಗಿ ಮನಸು ಚಂಚಲವಾಗುವ ಸಾಧ್ಯತೆಗಳು ಹೆಚ್ಚಿರುವ ಕಾರಣ ಏಕಾಗ್ರತೆಯಿಂದ ಮುಂದಿನ ಜೀವನ ರೂಪುಗೊಳಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆಗೆ ಪ್ರಾಶಸ್ತ್ಯ ನೀಡಬೇಕೆಂದರು.
ಜಿಪಂ ಸದಸ್ಯ ವೈ.ಎಚ್. ಹುಚ್ಚಯ್ಯ, ಪುರಸಭೆ ಸದಸ್ಯ ಶಂಕರ, ಮುಖಂಡ ಜೆಸಿಬಿ ರಾಜಣ್ಣ, ಉದ್ಯಮಿ ಶ್ರೀನಿವಾಸ, ಬಿಜಿಎಸ್ ಕಾಲೇಜು ಪ್ರಾಚಾರ್ಯ ಚೌಡಪ್ಪ, ಪ್ರಾಚಾರ್ಯ ಕುಮಾರಯ್ಯ, ಉಪಪ್ರಚಾರ್ಯ ಮಮತಾಮಣಿ ಉಪಸ್ಥಿತರಿದ್ದು, ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹಧನ ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

