ಪಪಂ: ರು. 15.12 ಲಕ್ಷ ಉಳಿತಾಯ ಬಜೆಟ್
ಗುಬ್ಬಿ: ಪಟ್ಟಣ ಪಂಚಾಯ್ತಿಯ 2014-15 ನೇ ಸಾಲಿನ ಆಯವ್ಯಯ ಸಭೆಯಲ್ಲಿ 15.12 ಲಕ್ಷ ರು.ಗಳ
ಉಳಿತಾಯ ಬಜೆಟ್ ಅನ್ನು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಜಿ.ಡಿ. ಸುರೇಶ ಗೌಡ ಮಂಡಿಸಿದರು.
ಪಟ್ಟಣದ ಪಟ್ಟಣ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅಯವ್ಯಯ ಮಂಡನಾ ಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದ ಅಧ್ಯಕ್ಷರು ಪ್ರಾರಂಭಿಕ ಶಿಲ್ಕು 171.58 ಲಕ್ಷ ರು, 2014-15 ನೇ ಸಾಲಿನ ಜಮಾ 1294.13 ಲಕ್ಷ ರು, ಒಟ್ಟು 1465.71 ಲಕ್ಷ ರು.ಗಳಾಗಿದ್ದು 2014-15 ನೇ ಸಾಲಿನ ಖರ್ಚು1450.59 ಲಕ್ಷ ರು.ಗಳಾಗಲಿದ್ದು ಒಟ್ಟಾರೆ 15.12 ಲಕ್ಷ ರು.ಗಳ ಉಳಿತಾಯ ಬಜೆಟ್ ಮಂಡಿಸಿದರು.
ಬಜೆಟ್ ಮಂಡಿಸಿದ ನಂತರ ಮಾತನಾಡಿದ ಅಧ್ಯಕ್ಷರು ಪಟ್ಟಣದ ಅಗತ್ಯ ಮೂಲಭೂತ ಸಮಸ್ಯೆಗಳ ನಿವಾರಣೆ ಸೇರಿದಂತೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ಹಲವು ಮಹತ್ವದ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು. ಪಟ್ಟಣದ ನೈರ್ಮಲ್ಯತೆ, ಕುಡಿಯುವ ನೀರು, ಚರಂಡಿ ವ್ಯವಸ್ಥೆ, ರಸ್ತೆಗಳ ದುರಸ್ಥಿ ಸೇರಿದಂತೆ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಹಲವಾರು ಯೋಜನೆ: ಬಜೆಟ್ ಮಂಡನಾ ಸಭೆಯಲ್ಲಿ ಮಾತನಾಡಿದ ಶಾಸಕ ಎಸ್.ಆರ್. ಶ್ರೀನಿವಾಸ್ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಹಲವಾರು ಮಹತ್ವದ ಯೋಜನೆಗಳನ್ನು ರೂಪಿಸಲಾಗಿದ್ದು ಹಂತ ಹಂತವಾಗಿ ಪಟ್ಟಣವನ್ನು ಸಮಗ್ರವಾಗಿ ಆಭಿವೃದ್ಧಿಪಡಿಸಲಾಗುವುದೆಂದು ತಿಳಿಸಿದರು.
ಪಟ್ಟಣದ 11ನೇ ವಾರ್ಡ್ನಲ್ಲಿ ಯಾವುದೇ ರೀತಿಯ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ವಿಫಲವಾಗಿದ್ದಾರೆ. ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ
ಮಾಡುತ್ತಿಲ್ಲ. ಸ್ವಚ್ಛತೆ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಸದಸ್ಯ ಜಿ.ಸಿ ನರಸಿಂಹಮೂರ್ತಿ ತೀವ್ರ ಅಸಮಧಾನ ವ್ಯಕ್ತಪಡಿಸಿದರು.
ವಿಪರ್ಯಾಸ: ಸ್ವಚ್ಛತೆ ಬಗ್ಗೆ ಮೊದಲ ಆದ್ಯತೆ ನೀಡಬೇಕಾದ ಅಧಿಕಾರಿಗಳು 11ನೇ ವಾರ್ಡ್ನಲ್ಲಿ ಹಿಂದುಳಿದವರು ಅಲ್ಪಸಂಖ್ಯಾತರು ವಾಸಿಸುವ ಸ್ಥಳದಲ್ಲಿ ಕಸ ಮತ್ತು ಚರಂಡಿಯನ್ನು ಶುಚಿಗೊಳಿಸದೆ ನಿರ್ಲಕ್ಷಿಸಿದ್ದಾರೆ. ಪಟ್ಟಣದಲ್ಲಿ ಬಿಸಿಲಿನ ತಾಪವು ಹೆಚ್ಚುತ್ತಿದ್ದು, ರಸ್ತೆಗಳಲ್ಲಿರುವ ಗುಂಡಿಗಳಲ್ಲಿ ನೀರು ತುಂಬಿದ್ದು ಇದರಿಂದ ಕಾಲರಾ, ಇತ್ಯಾದಿ ಸಾಂಕ್ರಾಮಿಕ ರೋಗಗಳು ಹೆಚ್ಚುವ ಸಂಭವವಿದ್ದು ನೈರ್ಮಲ್ಯ ಕಾರ್ಯನಿರ್ವಹಿಸುವ ಅಧಿಕಾರಿ ಇಲ್ಲಿಯವರೆಗೂ ಯಾವುದೇ ಮುಂಜಾಗ್ರತಾ ಕ್ರಮಕೈಗೊಳ್ಳದೆ ಇರುವುದು ವಿಪರ್ಯಾಸ ಎಂದು ದೂರಿದರು. ಸದಸ್ಯ ಕೃಷ್ಣಮೂರ್ತಿ ಮಾತನಾಡಿ ಹಳೇ ಮಾರುಕಟ್ಟೆ ರಸ್ತೆಯಲ್ಲಿ ಪಾದಚಾರಿ ರಸ್ತೆಯಲಿ ಇಕ್ಕೆಲಗಳಲ್ಲಿ ಅನಧಿಕೃತವಾಗಿ ಹೂವು, ಹಣ್ಣು, ತರಕಾರಿ ಇವುಗಳನ್ನು ಇಟ್ಟುಕೊಂಡು ಆ ರಸ್ತೆಯು ಕಿರಿದಾಗಿದ್ದು, ಸಾರ್ವಜನಿಕರು ಓಡಾಡಲು ಮತ್ತು ವಾಹನ ಚಲಾವಣೆ ಕಷ್ಟಸಾಧ್ಯವಾಗಿದ್ದು ಈ ಬಗ್ಗೆ ದಿನನಿತ್ಯ ಗಲಾಟೆಗಳು ನಡೆಯುತ್ತಿದ್ದರೂ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಸಿಡಿಮಿಡಿಗೊಂಡರು. ಕೋಳಿ ಮತ್ತು ಮೀನಿನ ಮಾರಾಟದ ಅಂಗಡಿಗಳನ್ನು ಸಂತೆಯ ಮೈದಾನಕ್ಕೆ ವರ್ಗಾಯಿಸಲು ಹಿಂದಿನ ಸಭೆಯಲ್ಲಿ ತಿಳಿಸಿದ್ದರೂ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಕಾರಣವೇನೆಂದು ಪ್ರಶ್ನಿಸಿದರು.
ಸಭೆಯಲ್ಲಿ ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷೆ ಪುಷ್ಪಾವತಿ, ಮುಖ್ಯಾಧಿಕಾರಿ ಯೋಗಾನಂದಕುಮಾರ್, ಕಂದಾಯ ನಿರೀಕ್ಷಕ ಸಂತೋಷ್, ಎಂಜಿನಿಯರ್ ಪ್ರಕಾಶ್, ಲೆಕ್ಕಾಧಿಕಾರಿ ಜಯಣ್ಣ, ಆರೋಗ್ಯ ನಿರೀಕ್ಷಕ ರೈಸ್ ಅಹಮದ್, ಅಕೌಂಟೆಂಟ್ ಪ್ರೀತಂ ಸೇರಿದಂತೆ ಪಟ್ಟಣ ಪಂಚಾಯ್ತಿ ಸದಸ್ಯರುಗಳು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಸರ್ಕಾರದಿಂದ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿರುವ ವಕೀಲರಾದ ಕೆ.ಜಿ.ನಾರಾಯಣ್, ಮಹಮದ್ ಷಫಿ, ಮಹಿಳಾ ಸದಸ್ಯೆ ನಾಗರತ್ನಮ್ಮ ಇವರುಗಳನ್ನು ಸ್ವಾಗತಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

