ಸ್ತ್ರೀಶಕ್ತಿ ಸಂಘ ಬಲಪಡಿಸಲು ಭವನ ನಿರ್ಮಾಣ: ಶಾಸಕ
ಗುಬ್ಬಿ: ಗ್ರಾಮೀಣ ಪ್ರದೇಶಗಳ ಶಿಕ್ಷಣ ವಂಚಿತ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವತ್ತ ಅಂಗನವಾಡಿ ಕೇಂದ್ರಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು ಸ್ತ್ರೀಶಕ್ತಿ ಸಂಘಗಳನ್ನು ಬಲಪಡಿಸಲು ಇಲಾಖೆಯಿಂದ ಸ್ತ್ರೀಶಕ್ತಿ ಭವನವನ್ನು ನಿರ್ಮಿಸಲಾಗಿದೆ. ತಾಲೂಕಿನ ಸ್ತ್ರೀಶಕ್ತಿ ಸಂಘದವರು ಭವನವನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ಪಥದತ್ತ ಸಾಗುವಂತೆ ಶಾಸಕ ಎಸ್.ಆರ್. ಶ್ರೀನಿವಾಸ್ ಕರೆ ನೀಡಿದರು.
ಪಟ್ಟಣದ ಹಳೇ ಪ್ರವಾಸಿ ಮಂದಿರದ ಸಿಡಿಪಿಓ ಕಚೇರಿ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನಾ ಮತ್ತು ತಾಲೂಕು ಸ್ತ್ರೀಶಕ್ತಿ ಭವನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಳೆದ ಹಲವು ವರ್ಷಗಳಿಂದಲೂ ನೆನಗುದಿಗೆ ಬಿದ್ದಿದ್ದ ತಾಲೂಕು ಪಂಚಾಯತಿ ಕಚೇರಿಯನ್ನು ಇಂದು ಉದ್ಘಾಟನೆ ಮಾಡಿದ್ದು ಸಾರ್ವಜನಿಕರು ಸರ್ಕಾರಿ ಕಚೇರಿಗಳ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಶಾಸಕ ಡಾ.ಎಂ.ಆರ್. ಹುಲಿನಾಯ್ಕರ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸಾಕಮ್ಮ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ವೈ.ಎಚ್.ಹುಚ್ಚಯ್ಯ, ಪಿ.ಬಿ. ಚಂದ್ರಶೇಖರಬಾಬು, ಮಮತಾ ಶಿವಲಿಂಗಯ್ಯ, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಜಿ.ಡಿ.ಸುರೇಶ್ಗೌಡ, ಪಟ್ಟಣ ಪಂಚಾಯ್ತಿ ಸದಸ್ಯ ಜಿ.ಸಿ.ನರಸಿಂಹಮೂರ್ತಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಎನ್.ಸುಜಾತಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಆರ್. ಸುಬ್ರಹ್ಮಣ್ಯ, ಯೋಜನಾ ವ್ಯವಸ್ಥಾಪಕ ಡಿ. ರಾಜಶೇಖರ್, ಜಿಲ್ಲಾ ಪಂಚಾಯ್ತಿ ಲೆಕ್ಕಾಧಿಕಾರಿ ಕುಂಭಯ್ಯ, ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಬಿ.ಮಂಜುನಾಥ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸೋಮಶೇಖರ್, ಸಮಾಜ ಕಲ್ಯಾಣಾಧಿಕಾರಿ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಹೊನ್ನೇಶಪ್ಪ ಸೇರಿದಂತೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.
ಸಮಾರಂಭಕ್ಕೆ ಬಹಿಷ್ಕಾರ: ಸ್ತ್ರೀಶಕ್ತಿ ಭವನದ ಉದ್ಘಾಟನೆಗೆ ತಾಲೂಕು ಪಂಚಾಯ್ತಿ ಅಧ್ಯಕ್ಷರು ಮತ್ತು ಸದಸ್ಯರನ್ನು ಆಹ್ವಾನಿಸದೆ ಕಡೆಗಣಿಸಲಾಗಿದೆ ಎಂದು ಆರೋಪಿಸಿ ಸಮಾರಂಭವನ್ನು ಬಹಿಷ್ಕರಿಸಿ ಹೊರನಡೆದ ಪ್ರಸಂಗ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

