ಮಹಿಳಾ ಸಮಾವೇಶಕ್ಕೆ ಸಿದ್ಧತೆ
ಚಿಕ್ಕನಾಯಕನಹಳ್ಳಿ: ತುಮಕೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಮಹಿಳಾ ಸಮಾವೇಶವನ್ನು ಯಶಸ್ವಿಗೊಳಿಸಲು ಕಾರ್ಯಕರ್ತರು ಹೆಚ್ಚಿನ ರೀತಿಯಲ್ಲಿ ಶ್ರಮಿಸಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಮೆಎಣ್ಣೆ ಕೃಷ್ಣಯ್ಯ ನುಡಿದರು. ಅವರು ಫೆ.10ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಈ ಸಮಾವೇಶಕ್ಕೆ ನಮ್ಮ ಪಕ್ಷದ ಸರ್ವೋಚ್ಚ ನಾಯಕರು ಹಾಗೂ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಫೆ.16ರಂದು ತುಮಕೂರಿಗೆ ಆಗಮಿಸಲಿದ್ದಾರೆ. ಈ ನಿಟ್ಟಿನಲ್ಲಿ ಸಮಾವೇಶವನ್ನು ಯಶಸ್ವಿಗೊಳಿಸಬೇಕಾಗಿದೆ. ಆದ್ದರಿಂದ ತಾಲೂಕಿನಿಂದ ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಕರೆದೊಯ್ಯಬೇಕಾಗಿದೆ. ಅದಕ್ಕಾಗಿ ಫೆ.12 ಮತ್ತು 13ರಂದು ತಾಲೂಕಿನಾದ್ಯಂತ ಪ್ರವಾಸ ಮಾಡಿ ಹೋಬಳಿ ಮಟ್ಟದ ಪೂರ್ವಬಾವಿ ಸಭೆಗಳನ್ನು ಏರ್ಪಡಿಸಲಾಗಿದೆ. ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಹಾಗೂ ಅಭಿಮಾನಿಗಳು ಸಹಕರಿಸಬೇಕೆಂದು ಅವರು ತಿಳಿಸಿದರು.
ಶಾಲಾ ವಾರ್ಷಿಕೋತ್ಸವ
ಶಿರಾ: ತಾಲೂಕು ಮಾನಂಗಿ ಬಳಿಯ ಶ್ರೀ ಆಂಜನೇಯ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು. ಟ್ರಸ್ಟಿನ ಅಧ್ಯಕ್ಷರು, ಪದಾಧಿಕಾರಿಗಳು, ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿ ಹಾಜರಿದ್ದರು.
ವಿದ್ಯಾಜ್ಯೋತಿವಾರ್ಷಿಕೋತ್ಸವ
ಶಿರಾ: ನಗರದ ಶಿರಾ-ಅಮರಾಪುರ ರಸ್ತೆಯಲ್ಲಿರುವ ವಿದ್ಯಾಜ್ಯೋತಿ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರಂಭ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಡಿ.ಎನ್. ತಿಪ್ಪೇಸ್ವಾಮಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ರಾಜ್ ಕುಮಾರ್, ಸಿಪಿಐ ರಾಮಕೃಷ್ಣ, ಪ್ರಾಧ್ಯಾಪಕ ಡಾ.ಚಿಕ್ಕಣ್ಣ ಯಣ್ಣೇಕಟ್ಟೆ, ಶಿಕ್ಷಕ ರೇಣುಕಾನಂದ, ಸಂಸ್ಥಾಪಕ ಆರಾಧ್ಯಪ್ಪ ಮತ್ತಿತರರು ಇದ್ದರು.
ಪರಮಶಿವಯ್ಯ ವರದಿ ಜಾರಿಗಾಗಿ ಸಭೆ
ಶಿರಾ: ನೀರಾವರಿ ತಜ್ಞ ಜಿ.ಎಸ್. ಪರಮಶಿವಯ್ಯರವರ ನೆತೃತ್ವದಲ್ಲಿ, ತುಮಕೂರಿನ ಪ್ರವಾಸಿ ಮಂದಿರದಲ್ಲಿ ಕನ್ನಡಸೇನೆ ವತಿಯಿಂದ ಫೆ. 13 ರಂದು, ಗುರುವಾರ ಬೆಳಿಗ್ಗೆ 10 ಗಂಟೆಗೆ ಜಿ.ಎಸ್. ಪರಮಶಿವಯ್ಯ ವರದಿ ಜಾರಿಗೊಳಿಸಲು ಹಾಗೂ ಎತ್ತಿನ ಹೊಳೆ ಯೋಜನೆಯನ್ನು ವಿರೋಧಿಸಿ ಸಭೆ ಕರೆಯಲಾಗಿದೆ. ಸಮಾಜದ ಎಲ್ಲಾ ಬುದ್ಧಿ ಜೀವಿಗಳು, ರೈತರು, ವಿವಿದ ಸಂಘಸಂಸ್ಥೆಗಳು, ಎಲ್ಲಾ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಶಿರಾ ಕನ್ನಡಸೇನೆ ಘಟಕದ ತಾಲೂಕು ಅಧ್ಯಕ್ಷರಾದ ಅನಿಲ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೋದಿ ರ್ಯಾಲಿಯಲ್ಲಿ ಭಾಗವಹಿಸಲು ಕರೆ
ಶಿರಾ: ನಗರದ ಎಲ್ಲಾ ಹಿಂದುಳಿದ ವರ್ಗಗಳ ಪದಾಧಿಕಾರಿಗಳು, ಸಾರ್ವಜನಿಕರು, ಹೆಚ್ಚಿನ ಸಂಖ್ಯೆಯಲ್ಲಿ ದಾವಣಗೆರೆಯಲ್ಲಿ ಫೆ. 18 ರಂದು ನಡೆಯುವ ಮೋದಿ ರ್ಯಾಲಿಯಲ್ಲಿ ಭಾಗವಹಿಸಬೇಕೆಂದು ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ತಿಪ್ಪಣ್ಣ ತಿಳಿಸಿದ್ದಾರೆ. ಅವರು ಬಿಜೆಪಿ ಕಾರ್ಯಾಲಯದಲ್ಲಿ ಫೆ. 18 ರ ಮೋದಿ ರಾಲಿ ಫೆ. 23 ರಂದು ತುಮಕೂರಿನಲ್ಲಿ ನಡೆಯುವ ಹಿಂದುಳಿದ ವರ್ಗಗಳ ಸ್ವಾಭಿಮಾನಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತ, ಶಿರಾದಿಂದ ಸಮಾವೇಶಕ್ಕೆ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಭಾಗವಹಿಸುವಂತೆ ಶ್ರಮಿಸಬೇಕೆಂದು ಕಾರ್ಯಕತರಿಗೆ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಘಟಕದ ಉಪಾಧ್ಯಕ್ಷ ನಟರಾಜ, ಹೇಮಂತರಾಜ್, ಪಿ.ಎ. ರಘು, ಕಾರ್ಯದರ್ಶಿಗಳಾದ ಆರ್.ಲೋಕೇಶ್, ಗೋವಿಂದರಾಜು, ದಾಸಪ್ಪ, ಯರ್ರಪ್ಪ, ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

