ತುಮಕೂರು

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

Published On :

ಗುಬ್ಬಿ: ರಾಜ್ಯದಲ್ಲಿ ಸುಮಾರು 363 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರುಗಳಾಗಿ ಕಳೆದ ಹಲವು   ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು ಅವರಿಗೆ ಸರಿಯಾದ ರೀತಿಯಲ್ಲಿ ವೇತನವನ್ನು ನೀಡುತ್ತಿಲ್ಲ. ಇದರಿಂದ ಸದಾಕಾಲ ಅವರು ಪ್ರತಿಭಟನೆಗಳಲ್ಲಿ ತೊಡುಗುವುದರಿಂದ ವಿದ್ಯಾರ್ಥಿಗಳಿಗೆ ನಿಗದಿತ ಅವಧಿಯಲ್ಲಿ ಪಾಠ ಪ್ರವಚನ ಮುಗಿಸಲು ತೀವ್ರ ಸಮಸ್ಯೆಯಾಗಿದೆ. ಕೂಡಲೇ ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸಂಚಾಲಕ ಅರಣ್ ಒತ್ತಾಯಿಸಿದರು.   
ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಮತ್ತು ಎಬಿವಿಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಜಾಥಾ ನಡೆಸಿ ತಾಲೂಕು ಕಚೇರಿಯಲ್ಲಿ ತಮ್ಮ ಅಹವಾಲನ್ನು ತಾಲೂಕು ಅಧಿಕಾರಿಗಳಿಗೆ ನೀಡಿ ಮಾತನಾಡಿದ ಅವರು ಸರಕಾರಿ ಕಾಲೇಜುಗಳಲ್ಲಿ ಸಾಮಾನ್ಯವಾಗಿ ಅಭ್ಯಾಸ ಮಾಡುತ್ತಿರುವವರು ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು. ಹಾಗಾಗಿ ಅವರೆಲ್ಲ ಸರಕಾರಿ ಕಾಲೇಜುಗಳನ್ನೆ ನಂಬಿ ತಮ್ಮ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ರಾಜ್ಯದ ಎಲ್ಲಾ ಸರಕಾರಿ ಕಾಲೇಜುಗಳಲ್ಲಿ ಶೇ. 75 ಅತಿಥಿ ಉಪನ್ಯಾಸಕರು ಕೆಲಸ ನಿರ್ವಹಿಸುತ್ತಿದ್ದಾರೆ. ಅವರಿಗೆ ತಿಂಗಳಿಗೆ ಸರಿಯಾಗಿ ಗೌರವ ಧನವನ್ನು ನೀಡುತ್ತಿಲ್ಲ. ಇದರಿಂದ ಅವರು ಜೀವನ ನಡೆಸುವುದು ತುಂಬ ಕಷ್ಟವಾಗಿದೆ. ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟ ಧರಣಿ ಕೈ ಗೊಂಡಿದ್ದ ಉಪನ್ಯಾಸಕರಿಗೆ ಶಿಕ್ಷಣ ಮಂತ್ರಿಗಳು ತಮ್ಮ ಬೇಡಿಕೆಗಳು ಏನೇ ಇದ್ದರೂ ಅದನ್ನು ಕೂಡಲೆ ಪರಿಹರಿಸುತ್ತೇವೆ,  ತಾವು ಕಾಲೇಜುಗಳಿಗೆ ಹೋಗಿ ಕೆಲಸ ನಿರ್ವಹಿಸಿ. ನಮಗೆ 15 ದಿನಗಳ ಕಾಲವಕಾಶ ಕೊಡಿ ಎಂದು ಕೇಳಿಕೊಂಡಿದ್ದರು. ಆದರೆ ಇದುವರೆಗೂ ಆ ವಿಷಯದ ಬಗ್ಗೆ ಶಿಕ್ಷಣ ಸಚಿವರು ಚಕಾರ ಎತ್ತಿಲ್ಲ. ಹಾಗಾಗಿ ಮತ್ತೊಮ್ಮೆ ಉಪನ್ಯಾಸಕರು ಧರಣಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.