ಬಗರ್‌ಹುಕುಂ ಸಾಗುವಳಿ ಚೀಟಿ ನೀಡಲು ಆಗ್ರಹಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ
ಶಿರಾ: ತಾಲೂಕಿನ ಮೇಕೆರೆಹಳ್ಳಿ ಗ್ರಾಮಸ್ಥರು ತಮಗೆ ಬಗರ್‌ಹುಕುಂ ಸಾಗುವಳಿ ಚೀಟಿ ನೀಡಿ ಎಂದು ನಗರದ ತಹಸೀಲ್ದಾರ್ ಕಚೇರಿ ಮುಂಭಾಗ ಆಮರಣಾಂತ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.
ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ರೈತ ಮುಖಂಡರು ಮಾತನಾಡಿ ಮುದಿಗೆರೆ ಕಾವಲ್ ಸ.ನಂ. 12 ರಲ್ಲಿ ಸಾಗುವಳಿ ಮಾಡುತ್ತಿದ್ದು, 1998-99 ನೇ ಸಾಲಿನಲ್ಲಿ ಅರ್ಜಿ ಹಾಕಿದ್ದು ಅಲ್ಲಿಂದ ಇಲ್ಲಿಯವರೆಗೆ ಸಾಗುವಳಿ ಚೀಟಿಗಾಗಿ ಜನಪ್ರತಿನಿಧಿಗಳಿಗೂ ಅನೇಕ ಬಾರಿ ಮನವಿ ಮಾಡಿದರು ನಮಗೆ ಸಾಗುವಳಿ ಚೀಟಿ ನೀಡಿಲ್ಲ. ಹೋಗಲಿ ದಯಾಮರಣಕ್ಕಾದರೂ ಅವಕಾಶ ನೀಡಿ ಎಂದು ಸರ್ಕಾರವನ್ನು ಕೇಳಿದ್ದರೂ ಸರ್ಕಾರ ಕಿವುಡುತನ ತೋರಿಸುತ್ತಿದೆ. ಈ ಬೇಜವಾಬ್ದಾರಿಯ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದರು.
ಈ ರೈತರ ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ತಾಲೂಕಿನ ಎಲ್ಲಾ ಸಂಘ ಸಂಸ್ಥೆಗಳು ಹಾಗೂ ರೈತರು ಮತ್ತು ನಾಗರಿಕರು ಬೆಂಬಲ ಸೂಚಿಸಬೇಕೆಂದು ಕೋರಿದರು.
ಬಿಗಿ ಬಂದೋಬಸ್ತ್: ಸ್ಥಳದಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಹಾಗೂ ಸಿಬ್ಬಂದಿ ಆರೋಗ್ಯ ಇಲಾಖೆ ಆಂಬುಲೆನ್ಸ್ ವಾಹನದೊಡನೆ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಜೂಜಾಟ: ನಾಲ್ಕು ಬಂಧನ
ಶಿರಾ: ತಾಲೂಕಿನ ಗುಂಡಪ್ಪಚಿಕ್ಕೇನಹಳ್ಳಿ ಗ್ರಾಮದಲ್ಲಿ ನಿತ್ಯ ಜೂಜು ನಡೆಯುತ್ತದೆ ಎಂಬ ಸಾರ್ವಜನಿಕರ ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿದ ಪಟ್ಟನಾಯಕನಹಳ್ಳಿ ಪೊಲೀಸರು, ಗ್ರಾಮದ ಪಕ್ಕದ ಕೆರೆ ಮೈದಾನದಲ್ಲಿ ಅಂದರ್ ಬಾಹರ್ ಆಟದಲ್ಲಿ ತೊಡಗಿದ್ದ ರಾಜಣ್ಣ, ಶಿವಣ್ಣ, ಕೃಷ್ಣಪ್ಪ, ನಾರಾಯಣಪ್ಪರನ್ನು ಬಂಧಿಸಿ ಜೂಜಾಟದಲ್ಲಿ ಪಣಕ್ಕಿಟ್ಟಿದ್ದ ನಗದು ವಶ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಶಿರಾ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಹನುಮಂತರಾಯಪ್ಪ ಮಾರ್ಗದರ್ಶನದಲ್ಲಿ ಎಎಸ್‌ಐ ದೊಡ್ಡರಂಗಯ್ಯ, ಕಾನ್ಸ್‌ಟೇಬಲ್‌ಗಳಾದ ನರೇಂದ್ರ, ರಮೇಶ್, ಖಾಜಾಹುಸೇನ್ ದಾಳಿಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

