ತುಮಕೂರು

ಶೀಘ್ರವೇ ಮಲ್ಟಿಸ್ಟೇಟ್ ಸಹಕಾರಿ ಬ್ಯಾಂಕ್ ಆರಂಭ, ಮರ್ಚೆಂಟ್ಸ್ ಬ್ಯಾಂಕ್ 6ನೇ ಶಾಖೆ ಲೋಕಾರ್ಪಣೆ

Published On :

ತುಮಕೂರು: ರಾಜ್ಯದಲ್ಲೇ ಪ್ರಥಮ ಬಾರಿಗೆ ಅತಿ ಶೀಘ್ರವೇ ಮಲ್ಟಿಸ್ಟೇಟ್ ಸಹಕಾರಿ ಬ್ಯಾಂಕನ್ನು ತಮ್ಮ ಸಹಕಾರಿ ಬ್ಯಾಂಕ್ ವತಿಯಿಂದ ಪ್ರಾರಂಭಿಸಲಾಗುತ್ತಿದೆ ಎಂದು ತುಮಕೂರು ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎನ್.ಎಸ್. ಜಯಕುಮಾರ್ ತಿಳಿಸಿದರು.
ಈ ಸಂಬಂಧ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಪರವಾನಗಿ ಲಭಿಸಲಿದೆ ಎಂದು ತಿಳಿಸಿದರು. ತುಮಕೂರಿನ ಶಿರಾ ಗೇಟ್‌ನಲ್ಲಿ ಹೊಸದಾಗಿ ಆರಂಭಿಸಿದ ಬ್ಯಾಂಕ್ 6ನೇ ಶಾಖೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಸಾಲ ಸೇವಾ ಸೌಲಭ್ಯ ನೀಡುವ ಉದ್ದೇಶದಿಂದ ಪ್ರಾರಂಭವಾದ  ಸಹಕಾರಿಯು ಜನರ ನಂಬಿಕೆಗೆ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಕೈಗಾರಿಕೆಗಳು ಹಾಗೂ ಕೈಗಾರಿಕೋದ್ಯಮಿಗಳು ತಮ್ಮ ಸಹಕಾರಿ ಸಾಲ-ಸೌಲಭ್ಯ ಹೆಚ್ಚಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದರು.   ತುಮಕೂರು ಮಚೆಂರ್ಟ್ಸ್ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನ ಆರನೇ ಶಾಖೆಯನ್ನು ಡಾ. ಶಿವಕುಮಾರ ಸ್ವಾಮೀಜಿಯವರ ಪಾದಪೂಜೆಯೊಂದಿಗೆ ಲೋಕಾರ್ಪಣೆಗೊಳಿಸಲಾಯಿತು. ಶಾಸಕ ಡಾ.ರಫೀಕ್ ಅಹಮದ್ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ಸಾಮಾನ್ಯ ಜನರ ಪ್ರಗತಿ ಹಾಗೂ ಅಭಿವೃದ್ಧಿಯಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ ಅಪಾರವಾಗಿದೆ. ಸಮಾಜದ ಎಲ್ಲ ವರ್ಗದ ಜನರಿಗೂ ಸರ್ಕಾರಿ ಬ್ಯಾಂಕ್ ಜೊತೆ ಜೊತೆಗೆ ಅಗತ್ಯ ಸಾಲ-ಸೌಲಭ್ಯಗಳನ್ನು ಕ್ರೆಡಿಟ್ ಕೋ-ಆಪರೇಟಿವ್‌ಗಳೂ ನೀಡುತ್ತಿವೆ. ಹಾಗಾಗಿ ಜನತೆ ಸಹಕಾರಿ ಸಂಘಗಳ ಸಾಲ-ಸೌಲಭ್ಯವನ್ನು ಸದುಪಯೋಗ ಪಡಿಸಿಕೊಂಡು ತಾವೂ ಅಭಿವೃದ್ಧಿ ಹೊಂದುವ ಜೊತೆಗೆ ಸಹಕಾರಿ ಸಂಘಗಳನ್ನೂ ಅಭಿವೃದ್ಧಿ ಪಡಿಸುವಂತೆ ಜನರಲ್ಲಿ ಮನವಿ ಮಾಡಿದರು.
ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್, ಜ್ಯೋತಿಗಣೇಶ್, ಅನೇಕ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.