ತುಮಕೂರು

ಕೈಗಾರಿಕಾ ವಸಾಹತು ಪ್ರದೇಶ ನಿರ್ಮಿಸಿ ಉದ್ಯೋಗ ಸೃಷ್ಟಿ

Published On :

ಮಧುಗಿರಿ: ಕೇಂದ್ರ ಸರ್ಕಾರದ ಅನುದಾನ ಬಳಸಿ ಜಿಲ್ಲೆಯ ತುಮಕೂರು-ಶಿರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೈಗಾರಿಕಾ ವಸಾಹತು ಪ್ರದೇಶ ನಿರ್ಮಿಸುವ ಮೂಲಕ ಉದ್ಯೋಗ ಸೃಷ್ಟಿಸುವುದಾಗಿ ಸಂಸದ ಜಿ.ಎಸ್. ಬಸವರಾಜು ತಿಳಿಸಿದರು.
ಇಲ್ಲಿನ ಮಾಲೀಮರಿಯಪ್ಪ ರಂಗಮಂದಿರದಲ್ಲಿ ಜೂಪಿಟರ್ ಪಬ್ಲಿಕ್ ಶಾಲೆ ವತಿಯಿಂದ ಏರ್ಪಟಾಗಿದ್ದ ಮನ್ವಂತರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ಕೈಗಾರಿಕಾ ವಸಾಹತು ಪ್ರದೇಶ ನಿರ್ಮಿಸುವ ನಿಟ್ಟಿನಲ್ಲಿ ನಿರುದ್ಯೋಗ ಯುವಕರಿಗೆ ಉದ್ಯೋಗ ಕಲ್ಪಿಸುವುದಾಗಿ ಭರವಸೆ ನೀಡಿದ ಅವರು, ಅದೇ ರೀತಿ ಮಧುಗಿರಿ ತಾಲೂಕಿನಲ್ಲಿ ಜಮೀನು ನೀಡಿದರೆ ಇಲ್ಲೂ ಕೂಡ ಕೈಗಾರಿಕಾ ವಸಾಹತು ಪ್ರದೇಶ ನಿರ್ಮಿಸಿ ಉದ್ಯೋಗ ದೊರಕಿಸಿ ಕೊಡುವುದಾಗಿ ತಿಳಿಸಿದರು. ಪಟ್ಟಣದ ರಾಘವೇಂದ್ರ ವಿದ್ಯಾ ಸಂಸ್ಥೆ ಆಡಳಿತ ಮಂಡಳಿ ಮಧುಗಿರಿಯಲ್ಲಿ ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಮತ್ತು ತರಬೇತಿ ಕರಕುಶಲ ಕೇಂದ್ರ ಸ್ಥಾಪಿಸಲು ಮುಂದಾದರೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಶಿಕ್ಷಕರು ಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆ ಗುರುತಿಸಲು ಮನ್ವಂತರ ಕಾರ್ಯಕ್ರಮ ಅತ್ಯವಶಕ, ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಅಧಿಕ ಒತ್ತು ಕೊಟ್ಟು ಸತ್ಪ್ರಜೆಗಳನ್ನಾಗಿ ರೂಪಿಸಬೇಕು ಎಂದರು.
ಸಂಸ್ಥಾಪಕ ಕಾರ್ಯದರ್ಶಿ ಡಾ.ಜಿ.ಕೆ.ಜಯರಾಮ್ ಮಾತನಾಡಿ ನಮ್ಮ ಸಂಸ್ಥೆ ವತಿಯಿಂದ ಈಗಾಗಲೇ ನರ್ಸಿಂಗ್ ಕಾಲೇಜು, ವಿಜ್ಞಾನ ವಿಭಾಗ ಮತ್ತು ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ ಉತ್ತಮ ಶಿಕ್ಷಣ ಕೊಡುವಲ್ಲಿ ಮುಂದಿದೆ. ಸಂಸದ ಬಸವರಾಜು ಯಾವುದೇ ರಾಜಕೀಯ ಪಕ್ಷದಿಂದ ಸ್ಪರ್ಧಿಸಿದರೂ ಬೆಂಬಲಿಸುವುದಾಗಿ ತಿಳಿಸಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಜಿ. ಶ್ರೀನಿವಾಸಮೂರ್ತಿ ಮಾತನಾಡಿದರು. ಸಂಸ್ಥಾಪಕ ಅಧ್ಯಕ್ಷೆ ವಿಮಲಾ ಜಯರಾಮ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಬಾಲಕೃಷ್ಣ, ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಕಾಂತ್, ಪದ್ಮನಾಭಾಚಾರ್, ಶ್ರೀನಾಥ್, ಅನೇಕರು ಉಪಸ್ಥಿತರಿದ್ದರು. ನಂತರ ಮಕ್ಕಳ ಮನ್ವಂತರ ಕಾರ್ಯಕ್ರಮ ನಡೆದು ಪೋಷಕರ ಮೆಚ್ಚುಗೆಗೆ ಪಾತ್ರವಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.