ಖಾಸಗಿ ಆಸ್ಪತ್ರೆಗಳು ಬಡ ರೋಗಿಗಳ ಬಗ್ಗೆ ಕರುಣೆ ತೋರಲಿ: ನಾಗರಾಜಯ್ಯ
ಕುಣಿಗಲ್: ಆರೋಗ್ಯ ಸೇವೆ ಎಂಬುದು ಎಲ್ಲಾ ವರ್ಗದ ಜನತೆಗೂ ಅತ್ಯವಶ್ಯಕವಾಗಿದೆ. ಪ್ರಸ್ತುತ ದಿನಗಳಲ್ಲಿ ಹಲವು ಕಾರಣಗಳಿಂದ ಗ್ರಾಮಾಂತರ ಜನತೆ ಸೂಕ್ತ ಆರೋಗ್ಯ ಚಿಕಿತ್ಸೆ ದೊರೆಯದೆ ಗಂಭೀರ ಸಮಸ್ಯೆ ಎದುರಿಸುವಂತಾಗಿದ್ದು, ಇಂತಹ ಸಮಸ್ಯೆಗಳಿಗೆ ಖಾಸಗಿ ಆಸ್ಪತ್ರೆಗಳು ರಿಯಾಯಿತಿ ದರದಲ್ಲಿ ಗ್ರಾಮಾಂತರ ಪ್ರದೇಶದ ಜನತೆ ಆರೋಗ್ಯಭಾಗ್ಯ ಕಲ್ಪಿಸಲು ಮುಂದಾಗಬೇಕೆಂದು ಶಾಸಕ ಡಿ.ನಾಗರಾಜಯ್ಯ ತಿಳಿಸಿದರು.
ಪಟ್ಟಣದ ಕುವೆಂಪು ನಗರದಲ್ಲಿ ಬುಧವಾರ ಎಂಎಂ ಮಲ್ಟಿಸ್ಪೆಷಾಲಿಟಿ ಹಾಸ್ಪಟೆಲ್ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಾಲೂಕು ಮಟ್ಟದಲ್ಲಿ ಸರ್ಕಾರವು ಹಲವು ಪ್ರಯತ್ನಗಳ ಹೊರತಾಗಿ ಆತ್ಯಾಧುನಿಕ ಚಿಕಿತ್ಸಾ ವ್ಯವಸ್ಥೆ ಕಲ್ಪಿಸುವುದು ಕಷ್ಟಕರಾವಾಗಿದ್ದು, ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳು ಈ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ರಿಯಾಯಿತಿ ದರದಲ್ಲಿ ಸೇವಾ ಮನೋಭಾವದಿಂದ ಗ್ರಾಮಾಂತರ ಪ್ರದೇಶಗಳಿಗೆ ತೆರಳಿ ಅಲ್ಲಿಗೂ ಸೇವೆ ವಿಸ್ತರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾಧಿಕಾರಿ ಕ.ಎಸ್.ಸತ್ಯಮೂರ್ತಿ, ತಹಸೀಲ್ದಾರ್ ಪುಟ್ಟನರಸಯ್ಯ, ಮಾಜಿ ಸಚಿವ ಎಚ್.ಡಿ,ರೇವಣ್ಣ, ಜಿಪಂ ಮಾಜಿ ಅಧ್ಯಕ್ಷ, ಸದಸ್ಯ ಡಾ.ಬಿ.ಎನ್.ರವಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್, ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್, ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್, ವಕೀಲರ ಸಂಘದ ಅಧ್ಯಕ್ಷ ದಯಾನಂದ್, ಪುರಸಭೆ ಸದಸ್ಯರಾದ ರಂಗಸ್ವಾಮಿ, ಮಂಜು, ಸತೀಶ ಮತ್ತಿತರರು ಉಪಸ್ಥಿತರಿದ್ದರು.
ಆಸ್ಪತ್ರೆ ಪ್ರಾರಂಭೋತ್ಸವ ಅಂಗವಾಗಿ ಉಚಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

