ಮರುವೇಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ಪದಚ್ಯುತಿ
ಮಧುಗಿರಿ: ಮಧುಗಿರಿ ಕಸಬಾ ಹೋಬಳಿ ಮರುವೇಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಜಯಮ್ಮ ಸದಾನಂದದಾಸ್ ಅವರನ್ನು ಅವಿಶ್ವಾಸದ ನಿರ್ಣಯದ ಮೂಲಕ ಪದಚ್ಯುತಿಗೊಳಿಸಲಾಗಿದೆ.
ಒಟ್ಟು 14 ಸದಸ್ಯರಲ್ಲಿ ಕಾಂಗ್ರೆಸ್ ಬೆಂಬಲಿತ 8, ಜೆಡಿಎಸ್ ಬೆಂಬಲಿತ 6, ಮಂದಿ ಸದಸ್ಯರಿದ್ದರು. ಇದರಲ್ಲಿ ಕಾಂಗ್ರೆಸ್ ಬೆಂಬಲಿತ 4 ಮಂದಿ ಜೆಡಿಎಸ್ಗೆ ಬೆಂಬಲ ಸೂಚಿಸಿದ್ದರ ಹಿನ್ನೆಲೆಯಲ್ಲಿ ಅಧ್ಯಕ್ಷರನ್ನು ಪದಚ್ಯುತಿಗೊಳಿಸಲು ಸಾಧ್ಯವಾಯಿತು. ಉಳಿದ 4 ಮಂದಿ ಕಾಂಗ್ರೆಸ್ ಸದಸ್ಯರು ಗೈರು ಹಾಜರಾಗಿದ್ದರು.
ಈ ಚುನಾವಣೆ ಸದ್ಯಕ್ಕೆ ಪ್ರತಿಷ್ಠೆಯ ವಿಷಯವಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಿದ್ದಾ ಜಿದ್ದಿನ ರಾಜಕಾರಣ ನಡೆದಿರುವ ಪರಿಣಾಮ ಗಲಾಟೆ ಸಂಭವಿಸಬಹುದು ಎಂಬ ಕಾರಣದಿಂದ ಮುನ್ನಚ್ಚರಿಕೆ ಕ್ರಮವಾಗಿ ಡಿವೈಎಸ್ಪಿ ಗುರುಸ್ವಾಮಿ ನೇತೃತ್ವದಲ್ಲಿ ಮರುವೇಕೆರೆ ಗ್ರಾಮದ ತುಂಬೆಲ್ಲಾ ಪೊಲೀಸರು ಸರ್ಪಗಾವಲಿದ್ದರು. ಸಿಪಿಐ ಇಬ್ಬರು, ಪಿಎಸೈ ಇಬ್ಬರು ಮತ್ತು 60ಕ್ಕೂ ಅಧಿಕ ಮಂದಿ ಪೊಲೀಸ್ ಸಿಬ್ಬಂದಿ ನೇಮಿಸಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಉಪವಿಭಾಗಾಧಿಕಾರಿ ತಬಸ್ಸುಮ್ ಜುಹೇರಾ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
ತುಮಕೂರು ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಬಿ.ನಾಗೇಶ್ ಬಾಬು ಮಾತನಾಡಿ, ಹಾಲಿ ಶಾಸಕರು ಜೆಡಿಎಸ್ ಕಾರ್ಯಕರ್ತರಿಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರಲ್ಲದೆ ಈ ಚುನಾವಣೆ ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು.
ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ನರೇಂದ್ರಬಾಬು, ಎಪಿಎಂಸಿ ಅಧ್ಯಕ್ಷ ಬಿ.ವಿ. ನಾಗರಾಜು, ಪುರಸಭೆ ಸದಸ್ಯ ಎಂ.ಎಸ್. ಚಂದ್ರಶೇಖರ್ ಬಾಬು ಹಾಗೂ ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

