ತುಮಕೂರು

ಗ್ರಾಮೀಣ ಜನರು ಮೂಢನಂಬಿಕೆಗಳಿಗೆ ಬಲಿ ಆಗದಿರಲಿ

Published On :

ಗುಬ್ಬಿ: ಗ್ರಾಮೀಣ ಜನರು ಮೂಢನಂಬಿಕೆಗಳಿಗೆ ದಾಸರಾಗಿ ತಮ್ಮ ಜೀವನವನ್ನು ಉತ್ತಮಪಡಿಸಿಕೊಳ್ಳುವಲ್ಲಿ ವಿಫಲವಾಗಿರುವುದು ವಿಷಾದನೀಯ ಎಂದು ಕೋಡಿಹಳ್ಳಿ ಮಠದ ಶ್ರೀಬಸವಬೃಂಗೇಶ್ವರ ಮಹಾಸ್ವಾಮಿ ತಿಳಿಸಿದರು.
ತಾಲ್ಲೂಕಿನ ಕೊಪ್ಪ ವಲಯದ ಚೆಂಗಾವಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟಗಳ ಸಾಧನಾ ಸಮಾವೇಶ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಆಧುನಿಕತೆ ಬೆಳೆದಂತೆ ಗ್ರಾಮೀಣ ಜನರು ತಮ್ಮ ಬದುಕನ್ನು ಹಸನುಮಾಡಿಕೊಳ್ಳುವಲ್ಲಿ ಸಾಧ್ಯವಾಗದಿರುವುದು ವಿಪರ್ಯಾಸ, ಮೂಢನಂಬಿಕೆಗಳು ಇಡೀ ಸಾಮಾಜಿಕ ವ್ಯವಸ್ಥೆಗೆ ಮಾರಕವಾಗಿದ್ದು ಮೂಢನಂಬಿಕೆಗಳಿಂದ ಹೊರಬಂದು ಉತ್ತಮ ಸಮಾಜ ನಿರ್ಮಾಣ ಮಾಡುವತ್ತ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಕರೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಜಿಲ್ಲಾ ನಿರ್ದೇಶಕರಾದ ಪಿ. ಗಂಗಾಧರ ರೈ ಮಾತನಾಡಿ ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಸೀಮಿತವಾದ ಮಠ ಮಂದಿರಗಳಿಗಿಂತ ಭಿನ್ನವಾದ ಧರ್ಮಸ್ಥಳದ ಹೆಗ್ಗಡೆಯವರ ಪರಿಕಲ್ಪನೆ ಶೋಷಿತ ಮತ್ತು ನೊಂದವರ ಪರವಾಗಿದೆ ಎಂದರು.
 ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಗೋಪಾಲಯ್ಯ, ಉದ್ಯಮಿ ವಿಜಯಕುಮಾರ್, ಸಮಾಜ ಸೇವಕ ವಸಂತಕುಮಾರ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿಗಳಾದಪ್ರವೀಣ್‌ಕುಮಾರ್, ವಲಯದ ಮೇಲ್ವಿಚಾರಕ ರಮೇಶ್, ಕೃಷಿ ಮೇಲ್ವಿಚಾರಕ ಕುಮಾರ್ ವಾಟ್ಲೇಕರ್, ವಲಯದ ಸೇವಾಪ್ರತಿನಿಧಿಗಳು, ವಲಯ ಒಕ್ಕೂಟದ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.