ಭಿನ್ನಾಭಿಪ್ರಾಯ ಮರೆತು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಿ: ಡಿ.ಕೆ. ಶಿವಕುಮಾರ್
ಕುಣಿಗಲ್: ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ತಮ್ಮೊಳಗಿನ ಭಿನ್ನಾಭಿಪ್ರಾಯಗಳನ್ನು ಮರೆತು ಫೆ.16ರಂದು ತುಮಕೂರಿನಲ್ಲಿ ನಡೆಯಲಿರುವ ಮಹಿಳಾ ಸಮಾವೇಶ ಯಶಸ್ವಿಗೆ ಸಹಕರಿಸುವಂತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕರೆ ನೀಡಿದರು.
ಗುರುವಾರ, ತಾಲೂಕಿನ ವಿವಿಧೆಡೆಯಲ್ಲಿ ರಾಹುಲ್ ಗಾಂಧಿಯವರ ರೋಡ್ ಶೋ ಕಾರ್ಯಕ್ರಮದ ಮಾರ್ಗಗಳನ್ನು ಸಂಚರಿಸಿ, ನಂತರ ಕಾಂಗ್ರೆಸ್ ಮಹಿಳಾ ಸಮಿತಿ ಪದಾಧಿಕಾರಿಗಳು ಹಾಗೂ ಮುಖಂಡರೊಂದಿಗೆ ಚರ್ಚೆ ನಡೆಸಿದ ಅವರು, ಮಹಿಳಾ ಕಾಂಗ್ರೆಸ್ನ ಪದಾಧಿಕಾರಿಗಳು ಗ್ರಾಮಾಂತರ ಪ್ರದೇಶಗಳಿಗೆ ತೆರಳಿ ಪಕ್ಷದ ಸಾಧನೆಗಳ ಬಗ್ಗೆ ಸೋನಿಯಾ ಗಾಂಧಿಯವರ ಸ್ತ್ರೀಶಕ್ತಿ ಸಬಲೀಕರಣ ಸೇರಿದಂತೆ ಮಹಿಳೆಯರ ಆರ್ಥಿಕ ಸಬಲೀಕರಣ, ರಾಷ್ಟ್ರದ ಅಭಿವೃದ್ಧಿಗೆ ಕೈಗೊಂಡು ಅನುಷ್ಠಾನಕ್ಕೆ ತಂದಿರುವ ಹಲವು ಯೋಜನೆಗಳ ಬಗ್ಗೆ ಅರಿವು ಮೂಡಿಸಿ 16ರಂದು ನಡೆಯಲಿರುವ ಮಹಿಳಾ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದರು.
ಡಿ.ಕೆ.ಶಿವಕುಮಾರ್ ಚಾರಿಟಬಲ್ ಟ್ರಸ್ಟ್ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಸಂಸದರ ನಿಧಿಯಿಂದ ತಾಲೂಕಿನಲ್ಲಿ ಸ್ಥಾಪಿಸಲಾಗಿರುವ ಅತಿಕಡಿಮೆ ದರದಲ್ಲಿ ಶುದ್ಧ ಕುಡಿಯುವ ನೀರು ಮಾರಾಟ ಕೇಂದ್ರಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಸಾಧ್ಯವಾದರೆ ರಾಹುಲ್ ಗಾಂಧಿಯವರಿಂದಲೇ ಸಂತೇಮಾವತ್ತೂರು ಅಥವಾ ಹುಲಿಯೂರುದುರ್ಗದಲ್ಲಿ ರಾಜ್ಯಹೆದ್ದಾರಿಯ ಮಗ್ಗುಲಲ್ಲೆ ಸ್ಥಾಪಿಸಲಾಗಿರುವ ಕೇಂದ್ರಗಳಿಗೆ ಚಾಲನೆ ನೀಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಸಚಿವರ ಭೇಟಿ ಸಮಯದಲ್ಲಿ ಮಾಜಿ ಶಾಸಕ ಬಿ.ಬಿ.ರಾಮಸ್ವಾಮಿಗೌಡ, ಮಹಿಳಾ ಕಾಂಗ್ರೆಸ್ ತಾಲೂಕು ಅಧ್ಯಕ್ಷೆ ಲೀಲಾವತಿ, ಪ್ರಮುಖರಾದ ಪದ್ಮ, ಜಯಲಕ್ಷ್ಮಿ, ಅಶ್ವತ್ಥಮ್ಮ, ಪುರಸಭೆ ಸದಸ್ಯ ಅರುಣಕುಮಾರ, ಮಾಜಿ ಅಧ್ಯಕ್ಷ ರೆಹಮಾನ್ ಶರೀಫ್ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

