ಸಮ್ಮೇಳನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ: ಖಂಡನೆ
ತುರುವೇಕೆರೆ: ಪಟ್ಟಣದಲ್ಲಿ ಜರುಗಿದ 10 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಸ್ಎಸ್ಎಲ್ಸಿಯ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಗುವುದು ಎಂದು ಪ್ರಕಟಿಸಲಾಗಿತ್ತು. ಅದರಂತೆ ವೇದಿಕೆಯಲ್ಲಿ ಅತಿಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಬದಲಾಗಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಪ್ರತಿಭಾವಂತ ಮಕ್ಕಳಿಗೆ ಅನ್ಯಾಯ ಮಾಡಲಾಗಿದೆ ಎಂದು ತಾಲೂಕು ಕನ್ನಡ ಭಾಷಾ ಬೋಧಕರ ಸಂಘದ ಅಧ್ಯಕ್ಷ ಎಲ್. ಮಂಜೇಗೌಡ ಆಕ್ಷೇಪಿಸಿದ್ದಾರೆ.
ಹಲವಾರು ವಿದ್ಯಾರ್ಥಿಗಳು 125 ಅಂಕಗಳಿಗೆ 124 ಅಂಕಗಳನ್ನು ಗಳಿಸಿದ್ದರೂ ಸಹ ಕೇವಲ 119 ಅಂಕ ಪಡೆದ ಮಕ್ಕಳನ್ನು ವೇದಿಕೆಯಲ್ಲಿ ಗೌರವಿಸಿದುದು ದುರಂತವೇ ಸರಿ. ಕಾರ್ಯಕ್ರಮದ ಆಯೋಜಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಾಗಲೀ ಅಥವಾ ಕನ್ನಡ ಭಾಷಾ ಬೋಧಕರ ಸಂಘದಲ್ಲಿ ಮಾಹಿತಿ ಪಡೆದು ಗೌರವಿಸುವ ತೀರ್ಮಾನ ಕೈಗೊಳ್ಳಬೇಕಿತ್ತು. ಯಾವುದೇ ಸೂಕ್ತ ಮಾಹಿತಿ ಪಡೆಯದೇ ಏಕಪಕ್ಷೀಯ ತೀರ್ಮಾನ ಕೈಗೊಂಡಿರುವ ಕನ್ನಡ ಸಾಹಿತ್ಯ ಸಮ್ಮೇಳನದ ವ್ಯವಸ್ಥಾಪಕರ ನಿಲುವನ್ನು ಮಂಜೇಗೌಡ ಖಂಡಿಸಿದ್ದಾರೆ. 125 ಅಂಕಗಳಿಗೆ 124 ಅಂಕಗಳಿಸಿರುವ ಕೊಡಗೀಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಿ.ಎಚ್.ಅಶ್ವಿನಿ, ಮಾಚೇನಹಳ್ಳಿಯ ಎಸ್ಬಿಸಿಎಚ್ಎಸ್ ಶಾಲೆಯ ವಿದ್ಯಾರ್ಥಿನಿಯರಾದ ರಂಜಿತಾ, ಹಾಗೂ ಬಿ.ಎನ್.ಪೂಜಾ, ಜೆ ಪಿ ಆಂಗ್ಲ ಪ್ರೌಢಶಾಲೆಯ ಎಸ್.ಚೈತ್ರ ಹೆಚ್ಚು ಅಂಕಗಳಿಸಿರುವ ಪ್ರತಿಭಾನ್ವಿತರಾಗಿದ್ದಾರೆ. ಅವರಿಗೆ ನಿಜವಾಗಿಯೂ ಗೌರವ ಸಂದಾಯವಾಗಬೇಕಿತ್ತು ಎಂದು ಮಂಜೇಗೌಡ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

