ಇಂದು ವೀರಶೈವ ಸಮಾವೇಶ
ತುಮಕೂರು: ಪಾವಗಡದ ಎಸ್.ಎಸ್.ಕೆ. ಬಯಲು ರಂಗಮಂದಿರದಲ್ಲಿ ಭಾನುವಾರ ಬೆಳಗ್ಗೆ 11 ಗಂಟೆಗೆ ಪಾವಗಡ ತಾಲೂಕು ವೀರಶೈವ ಸಮಾಜ ಹಾಗೂ ಪಾವಗಡ ತಾಲೂಕು ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ವೀರಶೈವ ಮಹಾಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಅಟವಿ ಶಿವಲಿಂಗ ಸ್ವಾಮಿಗಳು, ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. ಚಿತ್ರದುರ್ಗ ಸಂಸದ ಜನಾರ್ದನ ಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಿ.ವಿ. ಮಹದೇವಯ್ಯ ವಹಿಸಲಿದ್ದಾರೆ. ಪ್ರಾಸ್ತಾವಿಕವಾಗಿ ಎ.ಎಂ. ವಾಗೀಶ್ ಆರಾಧ್ಯ ಮಾತನಾಡಲಿದ್ದಾರೆ. ಅರಸೀಕೆರೆ ಬಸಪ್ಪ ಬೀ ಅವರ ಅಮರ ಜ್ಯೋತಿ ನಾಟಕ ಕೃತಿಯನ್ನು ಜ್ಯೋತಿ ಪ್ರಕಾಶ್ ಮಿರ್ಜಿ ಬಿಡುಗಡೆಗೊಳಿಸಲಿದ್ದಾರೆ. ನಟ ದೊಡ್ಡಣ್ಣ ಉಪಸ್ಥಿತರಿರುವರು. ವಿಶೇಷ ಆಹ್ವಾನಿತರಾಗಿ ಪಾವಗಡ ಶಾಸಕ ಕೆ.ಎಂ. ತಿಮ್ಮರಾಯಪ್ಪ, ಮಾಜಿ ಸಚಿವ ವೆಂಕಟರಮಣಪ್ಪ, ಮಾಜಿ ಶಾಸಕ ಸೋಮ್ಲಾನಾಯಕ್, ಜಿ.ಎಸ್. ಧರ್ಮಪಾಲ್, ಗಂಗಾಧರ್, ಜೆ.ಇ. ಆಗಮಿಸುವರು. ವಿಶೇಷ ಆಹ್ವಾನಿತರಾಗಿ ತಹಸೀಲ್ದಾರ್ ಅಲ್ತಾಫ್ ಪಾಷ, ವೃತ್ತ ನಿರೀಕ್ಷಕ ಭಾನುಪ್ರಸಾದ್, ಇಓ ತಿಪ್ಪೇಸ್ವಾಮಿ, ಸೋಮಶೇಖರ್, ಶಿವಶಂಕರ್, ಎನ್. ವಿರೂಪಾಕ್ಷಯ್ಯ, ಎಂ. ಪರಮೇಶ್ವರಪ್ಪ, ಜಯದೇವಪ್ಪ, ಅಂತರಗಂಗೆ ಶಂಕರಪ್ಪ ಆಗಮಿಸುವರು. ಇದೇ ಸಂದರ್ಭದಲ್ಲಿ ದೊಡ್ಡಣ್ಣ, ಬಿ. ಬಸಪ್ಪ, ಚನ್ನಮಲ್ಲಪ್ಪ, ಜಿ. ಮಲ್ಲಿಕಾರ್ಜುನಪ್ಪ, ಯರಗುಂಟಪ್ಪ ಶಾಸ್ತ್ರಿ, ಎಚ್.ಬಿ. ಬಸವರಾಜಯ್ಯ ಅವರನ್ನು ಸನ್ಮಾನಿಸಲಾಗುವುದು.
ಇಂದು ನಮೋ ಭಾರತ್ ಉಪನ್ಯಾಸ
ತುಮಕೂರು: ಇಲ್ಲಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಫೆ.16 ರಂದು ಸಂಜೆ 5.30 ರಿಂದ 9 ಗಂಟೆಯವರೆಗೆ ಚಕ್ರವರ್ತಿ ಸೂಲಿಬೆಲೆ ಅವರ ಸಾರಥ್ಯದಲ್ಲಿ ನಮೋ ಭಾರತ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9986113864, 9019410624, 9986000163 ಸಂಪರ್ಕಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

