ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನ
ಕನ್ನಡಪ್ರಭ ವಾರ್ತೆ,ತುಮಕೂರು, ಫೆ.16
ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿವ ಪೌರಕಾರ್ಮಿಕರನ್ನು ರಾಜ್ಯ ಬಜೆಟ್ನಲ್ಲಿ ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಸಿಐಟಿಯು ನೇತೃತ್ವದಲ್ಲಿ ಪೌರಕಾರ್ಮಿಕರು ಡಿಸಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿ, ಬಂಧನಕ್ಕೊಳಗಾದರು.
ಪೌರ ಕಾರ್ಮಿಕರನ್ನು ಕಾಯಂಗೊಳಿಸುವ ಅಥವಾ ಕಾಯಂಗೊಳಿಸುವ ತನಕ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಘೋಷಣೆ ಮಾಡದ ರಾಜ್ಯ ಸರ್ಕಾರದ ಬಜೆಟ್ ಪೌರಕಾರ್ಮಿಕ ವಿರೋಧಿ ಎಂದು ಅರೋಪಿಸಿ, ಕರ್ನಾಟಕ ರಾಜ್ಯ ಮುನಿಸಿಪಲ್ ನೌಕರರ ಸಂಘ ಸಿಐಟಿಯು, ತುಮಕೂರು ಪೌರಕಾರ್ಮಿಕರ ಸಂಘ ಸಿಐಟಿಯು ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೌರಕಾರ್ಮಿಕರನ್ನು ಪೊಲೀಸರು ಬಂಧಿಸಿದರು.
ಮುತ್ತಿಗೆಗೂ ಮುನ್ನ ಎರಡು ದಿನಗಳಿಂದ ಪೌರಕಾರ್ಮಿಕರು ಧರಣಿ ನಡೆಸಿದ್ದರು. ಈ ಸಂದರ್ಭದಲ್ಲಿ ಪೌರಕಾರ್ಮಿಕರ ಧರಣಿಯನ್ನು ಬೆಂಬಲಿಸಿ ಪಿಯುಸಿಎಲ್ ಜಿಲ್ಲಾಧ್ಯಕ್ಷರಾದ ಪ್ರೊ.ಕೆ. ದೊರೈರಾಜು ಮಾತನಾಡಿದರು. ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಸಂದರ್ಭದಲ್ಲಿ ಪ್ರತಿಭಟನಕಾರರು ಪೊಲೀಸರ ನಡುವೆ ತಳ್ಳಾಟ, ನೂಕಾಟ ನಡೆಯಿತು.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಈ ಹೋರಾಟದಲ್ಲಿ ಸಂಘದ ಜಿಲ್ಲಾಧ್ಯಕ್ಷರಾದ ಸೈಯದ್ ಮುಜೀಬ್, ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ, ಖಜಾಂಚಿ ಕೆ.ಮಂಜುನಾಥ, ತುರುವೇಕೆರೆಯ ಯೋಗೀಶ್, ತಿಪಟೂರಿನ ಸೋಮಣ್ಣ, ಶಿವಣ್ಣ, ಮಧುಗಿರಿಯ ರವಿಕುಮಾರ್, ಕುಣಿಗಲ್ನ ತ್ಯಾಗರಾಜು ಡ್ರೈವರ್ಸ್ ಯೂನಿಯನ್ನ ಕಲೀಂಮುಲ್ಲಾ, ವಾಟರ್ ಮ್ಯಾನ್ ಸಂಘದ ಕಾಂತರಾಜು ಪಾಲ್ಗೊಂಡಿದ್ದರು.
ಪೌರಕಾರ್ಮಿಕರ ಸಮಸ್ಯೆಗಳ ಇತ್ಯರ್ಥದ ಹಿನ್ನೆಲೆಯಲ್ಲಿ ಸಂಘವು ಬೆಂಗಳೂರಿನಲ್ಲಿ ಹೋರಾಟ ಮುಂದುವರಿಸುವುದಾಗಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

