ತುಮಕೂರು

ಖಾತ್ರಿ ಯೋಜನೆಯಲ್ಲಿ ಸಾಕಷ್ಟು ಅಕ್ರಮ: ಲೋಕಾಯುಕ್ತರಿಗೆ ದೂರು

Published On :

ಕುಣಿಗಲ್: ತಾಲೂಕಿನ ಹುಲಿಯೂರುದುರ್ಗ ಗ್ರಾಮ ಪಂಚಾಯಿತಿಯ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿದ್ದು, ಅನುದಾನ ದುರುಪುಯೋಗವಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಜರುಗಿಸುವಂತೆ ಗ್ರಾಪಂ ಸದಸ್ಯರೊಬ್ಬರು ಲೋಕಾಯುಕ್ತರಿಗೆ ದೂರು ನೀಡಿರುವ ಘಟನೆ ಬೆಳಕಿಗೆ ಬಂದಿದೆ.
ಹುಲಿಯೂರುದುರ್ಗ ಗ್ರಾಮ ಪಂಚಾಯಿತಿಯ 2013-14 ನೇ ಸಾಲಿನ ನರೇಗ ಯೋಜನೆಯಡಿಯಲ್ಲಿ  ಗ್ರಾಪಂ ಅಧ್ಯಕ್ಷರು, ಪಿಡಿಒ ಅವರು ನಿಯಮಗಳನ್ನು ಗಾಳಿಗೆತೂರಿ, ಜಾಬ್ ಕಾರ್ಡ್ಗಳನ್ನು ಸಮರ್ಪಕವಾಗಿ ನಿರ್ವಹಿಸದೆ, ಲೋಕೋಪಯೋಗಿ ಇಲಾಖೆ ರಸ್ತೆಗೆ, ನರೇಗ ಯೋಜನೆ ಅನುದಾನವನ್ನು ಹಾಕಿ, ಕೆರೆಯ ಗೋಡುಮಣ್ಣನ್ನು ಜೆಸಿಬಿ ಯಂತ್ರಗಳ ನೆರವಿನಿಂದ ತೆಗೆದು, ಮಾನವ ಸಂಪನ್ಮೂಲ ಬಳಸದೆ, ಯಂತ್ರಗಳ ನೆರವಿನಿಂದ ಎಲ್ಲಾ  ರಸ್ತೆ ಅಭಿವೃದ್ಧಿ ಕಾಮಗಾರಿ ಮಾಡಿ ಅನುದಾನ ಮತ್ತು ಯೋಜನೆ ದುರ್ಬಳಕೆ ಮಾಡಿದ್ದಾರೆಂದು ಆರೋಪಿಸಿ, ಗ್ರಾಪಂ ಸದಸ್ಯ ಲೋಕೇಶ್ ಎಂಬುವವರು ಪಿಡಿಒ ವಿನಾಯಕ, ಗ್ರಾಪಂ ಅಧ್ಯಕ್ಷ ವೆಂಕಟೇಶ್ ಇತರರ ಮೇಲೆ ಲೋಕಾಯುಕ್ತರಿಗೆ ದೂರು ನೀಡಿದ ಮೇರೆಗೆ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
 ಗ್ರಾಪಂ ಸದಸ್ಯರ ಆರೋಪಗಳು ಸತ್ಯಕ್ಕೆ ದೂರುವಾಗಿರುವ ವಿಷಯವಾಗಿದೆ ಎಂದಿರುವ ಗ್ರಾಪಂ ಅಧ್ಯಕ್ಷ ವೆಂಕಟೇಶ್, ಹುಲಿಯೂರುದುರ್ಗ ಗ್ರಾಮ ಪಂಚಾಯಿತಿಯಲ್ಲಿ ನರೇಗ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.