ಜ್ಞಾನಾಭಿವೃದ್ಧಿಗೆ ಆಸಕ್ತಿ ಮುಖ್ಯ: ಪ್ರಕಾಶ್
ಕ.ಪ್ರ. ವಾರ್ತೆ ತುಮಕೂರು ಫೆ.17
ಜ್ಞಾನಾಭಿವೃದ್ಧಿಗೆ ಆಸಕ್ತಿ ಮುಖ್ಯ. ಆಸಕ್ತಿ ಬೆಳೆಸಿಕೊಂಡರೆ ಜ್ಞಾನಾಭಿವೃದ್ಧಿ ಸಾಧ್ಯ ಎಂದು ರೋಟರಿ ತುಮಕೂರು ಸೆಂಟ್ರಲ್ ಅಧ್ಯಕ್ಷ ಟಿ.ಆರ್.ಎಚ್. ಪ್ರಕಾಶ್ ಅಭಿಪ್ರಾಯಪಟ್ಟರು.
ಅವರು ತುಮಕೂರಿನ ವಾಸವಿ ಪಪೂ ಕಾಲೇಜಿನಲ್ಲಿ ಕರ್ನಾಟಕ ಜ್ಞಾನ, ವಿಜ್ಞಾನ ಸಮಿತಿ, ರೋಟರಿ ತುಮಕೂರು, ವಾಸವಿ ವಿದ್ಯಾಪೀಠದ ಸಂಯುಕ್ತಾಶ್ರಯದಲ್ಲಿ ನಡೆದ ಪ್ರಸ್ತುತ ಸಮಾಜಕ್ಕೆ ಮೂಢನಂಬಿಕೆ ವಿರೋಧಿ ಕಾನೂನು ಅಗತ್ಯವಿದೆಯೇ ಎಂಬ ವಿಷಯ ಕುರಿತ ಚರ್ಚಾಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿರು.
ವಿದ್ಯಾರ್ಥಿಗಳಲ್ಲಿ ಕುತೂಹಲ ಬಂದಾಗ ಸೃಜನಶೀಲತೆ ಬೆಳೆಯುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ, ಕೆಜೆವಿಎಸ್ ಅಧ್ಯಕ್ಷ ಚಂದ್ರಶೇಖರ್ ಆರಾಧ್ಯ, ಮಕ್ಕಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಲು ಇಂತಹ ವಿಚಾರಪೂರ್ಣ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ಮಕ್ಕಳು ಪ್ರಶ್ನಿಸುವ ಮನೋಭಾವವನ್ನು ಬೆಳೆಸಿಕೊಂಡು, ಸಕಾರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಂಡಾಗ ಗುರಿ ಮುಟ್ಟಲು ಸಾಧ್ಯ ಎಂದು ಹೇಳಿದರು.
ಅನೇಕತೆಯಲ್ಲಿ ಏಕತೆ: ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯ ಶಿಕ್ಷಕರಾದ ಸುಂದ್ರಪ್ಪ ಜೈನ್ ಮಾತನಾಡಿ, ಭಾರತ ಅನೇಕತೆಯಲ್ಲಿ ಏಕತೆಯನ್ನು ಸಾರಿದ ದೇಶ ಇಂತಹ ಸಂದರ್ಭದಲ್ಲಿ ನಂಬಿಕೆ, ಮೂಢನಂಬಿಕೆ ಬಗ್ಗೆ ನಾವು ಸೂಕ್ಷ್ಮ ತೀರ್ಮಾನವನ್ನು ಮಾಡಿ, ಬದುಕು ನಡೆಸಬೇಕಾಗಿದೆ. ಸಮಾಜದ ಅಭಿವೃದ್ಧಿಗೆ ಪೂರಕವಾಗಿ ನಂಬಿಕೆಗಳನ್ನು ಅಳವಡಿಸಿಕೊಂಡು ಮೂಢನಂಬಿಕೆಗಳ ಬಗ್ಗೆ ಜಾಗೃತಗೊಳ್ಳಬೇಕು ಹಾಗೂ ಸಮಾಜವನ್ನು ಜಾಗೃತಗೊಳಿಸಬೇಕು ಎಂದು ಅಭಿಪ್ರಾಯಪಟ್ಟರು. ಕೆಜೆವಿಎಸ್ ರಾಜ್ಯ ಸಮಿತಿಯಿಂದ ಎಚ್.ಎಂ. ವಸಂತ್ ಕುಮಾರ್ ಪಾಲ್ಗೊಂಡಿದ್ದರು. ವಿವಿಧ ಪ್ರೌಢಶಾಲೆಗಳಿಂದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇನ್ನರ್ವ್ಹೀಲ್ ಕ್ಲಬ್ ವತಿಯಿಂದ ಮಂಜುಳಾದೇವಿ, ಆರ್. ನಾಗರತ್ನ ಭಾಗವಹಿಸಿದ್ದರು. ಜಿಲ್ಲಾ ಖಜಾಂಚಿ ಡಿ.ಬಿ. ನಾಗಭೂಷಣ್ ಪಾಲ್ಗೊಂಡಿದ್ದರು. ತೀರ್ಪುಗಾರರಾಗಿ ನಿಡಸಾಲಿ ಪ್ರಸಾದ್, ಉಷಾ ಪಾಲ್ಗೊಂಡಿದ್ದರು. ಕೆಜೆವಿಎಸ್ ಜಿಲ್ಲಾ ಕಾರ್ಯದರ್ಶಿ ಎಂ.ಎಸ್. ಪರಮೇಶ್ವರಯ್ಯ ಕಾರ್ಯಕ್ರಮ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

