ತುಮಕೂರು

ರಾಷ್ಟ್ರೀಯ ಸೇವಾ ಯೋಜನಾ ವಿಶೇಷ ಶಿಬಿರ

Published On :

ಶಿರಾ:  ಶ್ರೀರಂಗನಾಥ ಪ್ರಥಮ ದರ್ಜೆ ಕಾಲೇಜು ವತಿಯಿಂದ ತಾಲೂಕಿನ ತೊಗರುಗುಂಟೆ ಗ್ರಾಮದಲ್ಲಿ ಫೆ. 17 ರಿಂದ 23 ರವರೆಗೆ ರಾಷ್ಟ್ರೀಯ ಸೇವಾ ಯೋಜನಾ ವಿಶೇಷ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯರಾದ ಕವಿತ.ವಿ. ತಿಳಿಸಿದ್ದಾರೆ.  ಶ್ರೀ ಅಮ್ಮಾಜಮ್ಮ ಸಮುದಾಯ ಭವನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಸಂಘದ ಅಧ್ಯಕ್ಷರಾದ ಆರ್. ನಾಗರಾಜು ಅವರು ಶಿಬಿರಕ್ಕೆ ಚಾಲನೆ ನೀಡುವರು. ಕಾರ್ಯದರ್ಶಿ ಎಚ್.ಜಿ. ಲಿಂಗಯ್ಯ ಅವರು ಧ್ವಜಾರೋಹಣ ನೆರವೇರಿಸಲಿದ್ದು, ಜಿ.ಆರ್. ರಂಗನಾಥ್ ಅವರು ಸಸಿ ನೆಡುವ ಕಾರ್ಯಕ್ರಮವನ್ನು ನಡೆಸಿಕೊಡುವರು. ಕಾರ್ಯಕ್ರಮದಲ್ಲಿ ಶ್ರೀ ಅಮ್ಮಾಜಮ್ಮ ದೇವಸ್ಥಾನದ ಯಜಮಾನ್ ದೊಡ್ಡೇಗೌಡರು, ಕಾರ್ಯದರ್ಶಿ ದೊಡ್ಡಯ್ಯ, ಉಪಾಧ್ಯಕ್ಷ ಮಲ್ಲಪ್ಪ, ಗ್ರಾ.ಪಂ. ಅಧ್ಯಕ್ಷೆ ಪುಷ್ಪಾ ಲೋಕೇಶ್, ಮತ್ತಿತರರು ಹಾಜರಿರುವರು. ಶಿಬಿರಾಧಿಕಾರಿಗಳಾಗಿ ಎ. ವೆಂಕಟರಮಣ ಕಾರ್ಯ ನಿರ್ವಹಿಸುವರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.