ತುಮಕೂರು

ಶೈಕ್ಷಣಿಕ ಗುಣಮಟ್ಟ ಉತ್ತಮ ಪಡಿಸಲು ಬಿಸಿಯೂಟ ಯೋಜನೆ

Published On :

ಗುಬ್ಬಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೈಕ್ಷಣಿಕ ಗುಣಮಟ್ಟ ಉತ್ತಮ ಪಡಿಸಲು ಶಾಲಾ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ಜಾರಿಗೊಳಿಸಿದ್ದು ದೇಶದ 11 ಕೋಟಿ 50 ಲಕ್ಷ ವಿದ್ಯಾರ್ಥಿಗಳು ಬಿಸಿಯೂಟದ ಸೌಲಭ್ಯ ಪಡೆಯುತ್ತಿದ್ದರೆ, ರಾಜ್ಯದ 12 ಲಕ್ಷ ಶಾಲೆಗಳ 66 ಲಕ್ಷ ವಿದ್ಯಾರ್ಥಿಗಳು ಬಿಸಿಯೂಟದ ಪ್ರಯೋಜನ ಪಡೆಯುತ್ತಿದ್ದಾರೆಂದು ಮಧ್ಯಾಹ್ನ ಉಪಾಹಾರ ಯೋಜನೆಯ ಸಹನಿರ್ದೇಶಕ ಎಸ್. ಜಯಕುಮಾರ್ ತಿಳಿಸಿದರು.
ಪಟ್ಟಣದ ಶ್ರೀಚಿದಂಬರಾಶ್ರಮದಲ್ಲಿ ತಾಲೂಕು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ನೌಕರರ ಒಕ್ಕೂಟದ ವತಿಯಿಂದ ಏರ್ಪಡಿಸಿದ್ದ ಶೈಕ್ಷಣಿಕ ಸಮಾವೇಶ ಹಾಗೂ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಶೇಕಡಾ 75 ರಷ್ಟು ಮಕ್ಕಳು ಅನಿಮಿಯದಿಂದ ಬಳಲುತಿದ್ದು ಶಾಲಾ ಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಉತ್ತಮ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದ 7 ಜಿಲ್ಲೆಗಳಲ್ಲಿ ರಾಗಿಯನ್ನು ಸರಬರಾಜು ಮಾಡಿ ರಾಗಿ ಮುದ್ದೆಯನ್ನು ನೀಡಲು ಚಿಂತನೆ ನಡೆದಿದೆ ಎಂದರು.
ಸಾನಿಧ್ಯ ವಹಿಸಿದ್ದ ಕುಪ್ಪೂರು-ತಮ್ಮಡಿಹಳ್ಳಿ ವಿರಕ್ತ ಮಠದ ಡಾ. ಅಭಿನವ ಮಲ್ಲಿಕಾರ್ಜುನ ದೇಶೀಕೇಂದ್ರ ಮಹಾಸ್ವಾಮೀಜಿ ಮಾತನಾಡಿ ಇಂದಿನ ಮಕ್ಕಳಿಗೆ ಕೇವಲ ಶಿಕ್ಷಣ ನೀಡಿದರೆ ಸಾಲದು. ಅವರಿಗೆ ನೈತಿಕ ಮತ್ತು ಮೌಲ್ಯಾಧಾರಿತ ಶಿಕ್ಷಣ ಅತ್ಯವಶ್ಯಕವಾಗಿದೆ ಎಂದು ಕರೆ ನೀಡಿದರು.  ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಗಂಗಯ್ಯ, ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸೋಮಶೇಖರ್, ಕ್ಷೇತ್ರ ಸಮನ್ವಯಾಧಿಕಾರಿ ನರೇಂದ್ರಕುಮಾರ್, ಚಿದಂಬರಾಶ್ರಮದ ಅಧ್ಯಕ್ಷ ಶಿವಚಿದಂಬರ ಶರ್ಮ, ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಎಂ.ಎಸ್.ಶಂಕರ್, ಎಚ್.ಕೆ. ಕರಿಯಪ್ಪ, ಕಾರ್ಯದರ್ಶಿ ಶಾಂತರಾಜು, ಉಮೇಶ್, ಕೆ.ಶಿವಾನಂದ್, ಶಂಕರಲಿಂಗಪ್ಪ, ಎಂ.ಶಿವಪ್ಪ ಸೇರಿದಂತೆ ತಾಲೂಕಿನ ಅನುದಾನಿತ ಶಾಲಾ ನೌಕರರ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.