ಅತ್ಯಾಚಾರ: ಪ್ರಕರಣ ದಾಖಲು
ಹೆಬ್ಬೂರು: ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಸಮೀಪದ ಬಳಗೆರೆ ಮಜಿರೆ ಗ್ರಾಮದಲ್ಲಿ ನಡೆದಿದೆ. ಸೋಮವಾರ ಸಂಜೆ ಹೆಬ್ಬೂರು ಹೋಬಳಿಗೆ ಸೇರಿದ ಬಳಗೆರೆ ಮಜಿರೆ ಗ್ರಾಮದ ಶಾಲೆ ಪಕ್ಕ ನೀರು ತರಲು ಹೋಗಿದ್ದ ಮಹಿಳೆ ಮೇಲೆ ಚಂದ್ರಶೇಖರ್ ಎಂಬಾತ ಅತ್ಯಾಚಾರವೆಸಗಿದ್ದಾನೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲ್ಲುಗಣಿಗಾರಿಕೆ ನಿಷೇಧ
ಕುಣಿಗಲ್: ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಹಸಗೆ ಗ್ರಾಮದ ಸರ್ವೇ ನಂ.131ರ, ಅಮೃತ್ ಮಹಲ್ ಪ್ರದೇಶ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಮೀಸಲು ಮತ್ತು ಸಂರಕ್ಷಿತ ಅರಣ್ಯ ಪ್ರದೇಶದ ಗಡಿಯಂಚಿಯನಲ್ಲಿ ನಡೆಯುತ್ತಿದ್ದ ಕಲ್ಲುಗಣಿಗಾರಿಕೆಗಳನ್ನು ನಿಲ್ಲಿಸಲಾಗಿದೆ. ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ, ಜಿಲ್ಲಾಧಿಕಾರಿಗಳು ನೀಡಿದ ಸೂಚನೆ ಮೇರೆಗೆ ಕಂದಾಯ ಇಲಾಖಾಧಿಕಾರಿಗಳು ಅಗತ್ಯ ಕ್ರಮ ಕೈಗೊಂಡು ಸೋಮವಾರ ಸಂಜೆಯಿಂದಲೇ ಕಲ್ಲುಗಣಿಗಾರಿಕೆ, ಕ್ರಷರ್ ಚಟುವಟಿಕೆಗಳನ್ನು ನಿಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

