ತುಮಕೂರು

ಪಠ್ಯೇತರ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಲು ಬಿ. ಸಿಂಧು ಕರೆ

Published On :

ತಿಪಟೂರು: ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳಿಗೇ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡು ಸರ್ವತೋಮುಖ ಅಭಿವೃದ್ಧಿಗೆ  ಮುಂದಾಗಬೇಕೆಂದು ಉಪವಿಭಾಗಾಧಿಕಾರಿ ಬಿ.ಸಿಂಧು ಕರೆ ನೀಡಿದರು.
ಪಟ್ಟಣದ ಸ್ಟೆಲ್ಲಾ ಮೆರಿಸ್ ಪ್ರೌಢಶಾಲೆಯಲ್ಲಿ ಬಾಲ ಭವನ ಸೊಸೈಟಿ ಬೆಂಗಳೂರು, ತಾಲೂಕು ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಅಂತರ ಶಾಲಾ ಮಕ್ಕಳ ನಾಟಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಬಿಇಓ ಪ್ರಭುಸ್ವಾಮಿ ಮಾತನಾಡಿ ಬಾಲಭವನ ಸೊಸೈಟಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳಲ್ಲಿರುವ ಪ್ರತಿಭೆಗೆ ಪ್ರೋತ್ಸಾಹ ನೀಡಿದಂತಾಗುತ್ತಿದ್ದು, ಈ ಕಾರ್ಯ ಶ್ಲಾಘನೀಯ ಎಂದರು.
ಅಧ್ಯಕ್ಷತೆಯನ್ನು ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಸ್.ಎಂ. ದಿಬ್ಬದಮುನಿ ವಹಿಸಿ ಮಾತನಾಡಿದರು. ಸಿಡಿಪಿಓ ಓಂಕಾರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ತಾಲೂಕಿನ ವಿವಿಧ ಶಾಲೆಗಳಿಂದ ಭಾಗವಹಿಸಿದ್ದ ವಿದ್ಯಾರ್ಥಿಗಳ 5 ತಂಡಗಳು ನಾಟಕವನ್ನು ಪ್ರದರ್ಶಿಸಿದರು. ಅತ್ಯುತ್ತಮ ಪ್ರದರ್ಶನ ನೀಡಿದ ಒಂದು ತಂಡವನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಯಿತು. ನಾಟಕ ಪ್ರದರ್ಶನದ ನಂತರ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪ್ರಮಾಣ ಪತ್ರಗಳನ್ನು ನೀಡಲಾಯಿತು.
ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜ್ಞಾನ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲೂರ್ಥ್, ಶಿಕ್ಷಣ ಇಲಾಖೆಯ ಈರೇಗೌಡರು ಮತ್ತಿತರರಿದ್ದರು. ಸ್ನೇಹ ಪ್ರಾರ್ಥಿಸಿ, ಗೋಪಾಲಪ್ಪ ನಿರೂಪಿಸಿ, ದೀಪಾ ಕಮತೆ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.