ಎನ್ಎಸ್ಎಸ್ ಶಿಬಿರಾರ್ಥಿಗಳಿಂದ ಶ್ರಮದಾನ
ಕ.ಪ್ರ. ವಾರ್ತೆ ತುಮಕೂರು ಫೆ.19
ತಾಲೂಕಿನ ಹೆಬ್ಬಾಕ, ಕಳಸೇಗೌಡನಪಾಳ್ಯ, ನರಸಾಪುರ ಗ್ರಾಮದಲ್ಲಿ ತುಮಕೂರಿನ ಶ್ರೀ ಸಿದ್ಧಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ವಾರ್ಷಿಕ ವಿಶೇಷ ಶಿಬಿರ ನಡೆಯಿತು.
ಈ ಶಿಬಿರದಲ್ಲಿ ಚರಂಡಿ ಸ್ವಚ್ಛತೆ, ಗ್ರಾಮ ನೈರ್ಮಲ್ಯ, ರಸ್ತೆ ನಿರ್ಮಾಣ, ಶೌಚಾಲಯಗಳ ಉಪಯೋಗ ಹಾಗೂ ಆರೋಗ್ಯ, ಮಾನವಿಯ ಮೌಲ್ಯಗಳ ಬಗ್ಗೆ ಗ್ರಾಮಸ್ಥರಿಗೆ ಅರಿವು ನೀಡಲಾಯಿತು.
ಬರಡು ರಾಸುಗಳಿಗೆ ತಪಾಸಣೆ, ಕಾಲುಬಾಯಿ ರೋಗಕ್ಕೆ ಉಚಿತ ಲಸಿಕಾ ಶಿಬಿರ, ಮ್ಯಾಜಿಕ್ ಶೋ, ಆರೋಗ್ಯ ಮತ್ತು ಯುವಜನತೆ ಬಗ್ಗೆ ಉಪನ್ಯಾಸ, ಜಿಲ್ಲಾ ವಾರ್ತಾ ಇಲಾಖೆಯಿಂದ ಮನಸ್ವಿನಿ ಮತ್ತು ಏಡ್ಸ್ ಅರಿವಿನ ಕಿರುಚಿತ್ರ ಪ್ರದರ್ಶನವನ್ನು ಗ್ರಾಮಸ್ಥರು ಹಾಗೂ ಶಿಬಿರಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿತ್ತು.
ಜೀವನದಲ್ಲಿನ ಹಾಸ್ಯ, ಪರಿಸರ ಗೀತೆಗಳು, ಸಾಮಾಜಿಕ ಸಮಸ್ಯೆಗಳ ಬಗ್ಗೆ ಶಿಬಿರಾರ್ಥಿಗಳು ಕಿರುಚಿತ್ರ ಪ್ರದರ್ಶನ ಸೇರಿದಂತೆ ಮತ್ತಿತರವುಗಳನ್ನು ಪ್ರತಿ ಸಂಜೆ ಹಮ್ಮಿಕೊಳ್ಳಲಾಗಿತ್ತು. ಗ್ರಾಮದಲ್ಲಿ ಶಿಬಿರಾರ್ಥಿಗಳು ಜಾಗೃತಿ, ಶ್ರಮದಾನ ಸೇರಿದಂತೆ ವಿವಿಧ ಸೇವೆಗಳನ್ನು ನೀಡಿದ್ದರಿಂದ ಗ್ರಾಮಸ್ಥರರ ಮೆಚ್ಚುಗೆಗೆ ಪಾತ್ರರಾದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಎಲ್. ವೈದ್ಯೇಶ್ವರ್ ಅವರು ಮಾತನಾಡಿ ಇಂತಹ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಜೀವನದಲ್ಲಿ ವ್ಯಕ್ತಿತ್ವ ವಿಕಸನ, ಶಿಸ್ತು, ಸಮಯ ಪ್ರಜ್ಞೆ, ಗ್ರಾಮೀಣ ಜೀವನದಲ್ಲಿನ ಸಮಸ್ಯೆಗಳನ್ನು ತಿಳಿಯಲು ಸಾಧ್ಯವಾಗುತ್ತದೆ ಎಂದರು.
ಸಿದ್ಧಗಂಗಾ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿ.ನಳಿನಾಕ್ಷಿ ಪ್ರಾಧ್ಯಾಪಕರಾದ ಕೆ.ಸಿದ್ದಪ್ಪ, ಸಜ್ಜೆಹೊಸಹಳ್ಳಿ ದೇವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

