ತುಮಕೂರು

ಮೌಲ್ಯಾಧಾರಿತ ಶಿಕ್ಷಣಕ್ಕೆ ಮುಂದಾಗಿ

Published On :

ಕ.ಪ್ರ. ವಾರ್ತೆ    ತುಮಕೂರು    ಫೆ.19
ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವಲ್ಲಿ ವಿದ್ಯಾಸಂಸ್ಥೆಗಳು ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಸತ್ಯಮೂರ್ತಿ ಅಭಿಪ್ರಾಯಪಟ್ಟರು.
ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಶಿರಾಗೇಟ್ನಲ್ಲಿರುವ ಹಿಂದೂಸ್ತಾನ್ ಎಜುಕೇಷನ್ ಸೊಸೈಟಿ 22ನೇ ಶಾಲಾ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ವಿದ್ಯಾರ್ಥಿಗಳಗೆ ಉನ್ನತ ಮಟ್ಟದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ಮಾಡಿಕೊಡುವ
ಜವಾಬ್ದಾರಿ ವಿದ್ಯಾಸಂಸ್ಥೆಗಳದ್ದಾಗಿದೆ. ವಿದ್ಯಾರ್ಥಿಗಳು ಓದಿನಲ್ಲಿ ಸಾಧನೆ ಮಾಡಬೇಕಾದಲ್ಲಿ ಉತ್ತಮ ಗುಣ ಮಟ್ಟದ ಶಿಕ್ಷಣದ ಅವಶ್ಯಕತೆ ಬೇಕಾಗಿರುತ್ತದೆ ಎಂದು ಹೇಳಿದರು.
ತಮ್ಮ ವಿದ್ಯಾಭ್ಯಾಸದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮನರಂಜನೆಯನ್ನು ಪಡೆಯುವುದರ ಜೊತೆಗೆ ಸಂಸ್ಕೃತಿಯ ಲಕ್ಷಣವನ್ನು ಉಳಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆಸಕ್ತಿ ವಹಿಸಿ ವಿದ್ಯಾಭ್ಯಾಸ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ತನ್ನದಾಗಿ ಒಲಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಹಿರೆಮಠಾಧ್ಯಕ್ಷ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ ಮಕ್ಕಳಿಗೆ ಆಸ್ತಿ ಮಾಡುವುದನ್ನು ಬಿಟ್ಟು ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡುವುದು ವಿದ್ಯಾರ್ಥಿಗಳ ಪೋಷಕರ ಕರ್ತವ್ಯವಾಗಿದೆ ಎಂದರು.
ಸೂಪ್ಹಾ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ಇಂತಿಯಾಜ್ ಅಹಮದ್ ಮಾತನಾಡಿ ಫಲಿತಾಂಶ ಹೆಚ್ಚಳಕ್ಕೆ ಮುಖ್ಯೋಪಾಧ್ಯಾಯರು ಸಮಯಕ್ಕೆ ಸರಿಯಾಗಿ ಶಾಲೆಗೆ ಬರಬೇಕು ಮತ್ತು ಶಿಕ್ಷಕರು ಸಹ ಸ್ವಯಂ ಪ್ರೇರಿತರಾಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಪತ್ರಕರ್ತ ಮಣ್ಣೆರಾಜು, ತುಮಕೂರು ನಗರ ಠಾಣೆಯ ವೃತ್ತ ನಿರೀಕ್ಷಕ ಅಬ್ದುಲ್ ಖಾದರ್ ಅವರನ್ನು ಸನ್ಮಾನಿಸಲಾಯಿತು.
ತುಮಕೂರು ಮಹಾನಗರಪಾಲಿಕೆ ಮಹಾಪೌರರಾದ ಗೀತಾರುದ್ರೇಶ್, ಜಿ.ಪಂ.ಸಿ.ಇ.ಓ ಗೋವಿಂದರಾಜು, ಎಚ್.ಎಸ್.ಇಸ್ಮತ್ ಉಲ್ಲಾಖಾನ್, ಕ್ಷೇತ್ರ ಶಿಕ್ಷಣಾಧಿಕಾರಿ ಕುಮುದಮ್ಮ, ಮುಸ್ತಾಕ್ ಅಹ್ಮದ್, ಅಧ್ಯಕ್ಷ ನಹೀಂ ಖಾನ್, ಯಾಸ್ಮೀನಾ ಸುಲ್ತಾನಾ, ಶಬ್ಬೀರ್ ಅಹ್ಮದ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.