ನೀರು ಹರಿಸಲು ಕ್ರಮಕೈಗೊಂಡಿಲ್ಲ: ಚಂದ್ರಶೇಖರಬಾಬು ಕಟು ಟೀಕೆ
ಗುಬ್ಬಿ: ತಾಲೂಕಿನ ನಿಟ್ಟೂರು ಕೆರೆ ಹೇಮಾವತಿ ನೀರಿನಿಂದ ಭರ್ತಿಯಾಗುತ್ತಿದ್ದಂತೆಯೇ ಪ್ರತಿವರ್ಷ ಫೆ.15 ಕ್ಕೆ ಸರಿಯಾಗಿ ಅಧಿಕಾರಿಗಳೆ ಕೆರೆಯ ಬಯಲಿಗೆ ನೀರು ಹರಿಸುತ್ತಿದ್ದು, ಆದರೆ ಈ ಬಾರಿ ಫೆ.17 ಕಳೆದರೂ ಕೆರೆಯಿಂದ ತೂಬಿನ ಮೂಲಕ ಬಯಲಿಗೆ ನೀರು ಹರಿಸುವಲ್ಲಿ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ಪಿ.ಬಿ.ಚಂದ್ರಶೇಖರಬಾಬು ಟೀಕಿಸಿದ್ದಾರೆ.
ಫೆ.19ರೊಳಗೆ ಕೆರೆ ಬಯಲಿಗೆ ಹೇಮಾವತಿ ಅಧಿಕಾರಿಗಳು ನೀರು ಹರಿಸದಿದ್ದರೆ ಈ ಭಾಗದ ರೈತರೊಂದಿಗೆ ಉಗ್ರ ಸ್ವರೂಪದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪಟ್ಟಣದ ಶ್ರೀ ರುದ್ರೇಶ್ವರ ಟವರ್ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ತಾಲೂಕಿನ ಕಡಬ ಕೆರೆಗೆ ಈವರೆಗೂ ನೀರುಹರಿಸುವಲ್ಲಿ ಹೇಮಾವತಿ ಅಧಿಕಾರಿಗಳು ಕ್ರಮಕೈಗೊಂಡಿಲ್ಲ. ನಿಯಮಬಾಹಿರವಾಗಿ ಬೇರೆ ಬೇರೆ ತಾಲೂಕುಗಳ ಕೆರೆಗಳಿಗೆ ಹೇಮಾವತಿ ನೀರು ಹರಿಸುತ್ತಿರುವ ಹೇಮಾವತಿ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು ನಿಯಮಾನುಸಾರ ತಾಲೂಕಿನ ಪ್ರಮುಖ ಕೆರೆಗಳಿಗೆ ಹೇಮಾವತಿ ನೀರು ಹರಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಎಪಿಎಂಸಿ ಅಧ್ಯಕ್ಷ ಆರ್. ಹಿತೇಶ್, ನಿಟ್ಟೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಗಿರೀಶ್, ಮುಖಂಡರಾದ ತಿಮ್ಮೇಗೌಡ, ಜಗದೀಶ್, ಸಂತೋಷ್, ನರಸಿಂಹಮೂರ್ತಿ ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

